ಶ್ರೀನಿವಾಸಪುರ: ಸಾಹಿತ್ಯದಲ್ಲಿ ರಾಷ್ಟ್ರೀಯ ಭಾವನೆ ಬಿಂಬಿಸುವುದು ಇಂದಿನ ಅಗತ್ಯವಾಗಿದೆ. ಸಾಹಿತಿಗಳು ರಾಷ್ಟ್ರೀಯ ಹಿತಾಸಕ್ತಿಗೆ ಪೂರಕವಾದ ಸಾಹಿತ್ಯ ರಚನೆಯಲ್ಲಿ ತೊಡಗಬೇಕು ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಸಂಚಾಲಕಿ ಟಿ.ಎಸ್. ಮಾಯಾ ಬಾಲಚಂದ್ರ ಹೇಳಿದರು.

ಪಟ್ಟಣದ ರಾಮಮಂದಿರದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು.

ಹಿರಿಯ ಸಾಹಿತಿಗಳ ಮಾರ್ಗದರ್ಶನದಲ್ಲಿ ಕಿರಿಯ ಲೇಖಕರನ್ನು ದೇಶದ ಹಿತಾಸಕ್ತಿಗೆ ಪೂರಕವಾಗಿ ರೂಪಿಸುವುದು ಪರಿಷತ್ತಿನ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಪ್ರತಿ ತಿಂಗಳು ಮೂರನೇ ಶನಿವಾರ ಮಧ್ಯಾಹ್ನ 3 ಗಂಟೆಗೆ ಪರಿಷತ್ತಿನ ಸದಸ್ಯರ ಸಭೆ ನಡೆಸಲಾಗುವುದು. ಸಭೆಯಲ್ಲಿ ಸಾಹಿತ್ಯ ಚಟುವಟಿಕೆ ಕೈಗೊಳ್ಳಲಾಗುವುದು. ಸಮಾನ ಮನಸ್ಕರನ್ನು ಪರಿಷತ್ತಿನ ಸದಸ್ಯರನ್ನಾಗಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಸಂಯೋಜಕ ಕೇಶವಮೂರ್ತಿ ಮಾತನಾಡಿ, ಸಾಹಿತ್ಯ ವ್ಯಕ್ತಿಯ ಜೀವನದಲ್ಲಿ ಹಾಸುಹೊಕ್ಕಾಗಿದೆ. ಪರಿಷತ್ತಿನ ವತಿಯಿಂದ ಸೃಜನಶೀಲ ಸಾಹಿತ್ಯ ನಿರ್ಮಾಣ ಕಾರ್ಯಕ್ಕೆ ಬೆಂಬಲ ನೀಡಲಾಗುವುದು. ಓದುಗರ ತಂಡಗಳನ್ನು ಕಟ್ಟಲಾಗುವುದು. ವ್ಯಕ್ತಿತ್ವ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯದರ್ಶಿ ರಾಯಲ್ಪಾಡ್ ರಾಘವೇಂದ್ರ, ವೇಣು ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎನ್.ಬಿ. ಗೋಪಾಲಗೌಡ, ಮುಖಂಡರಾದ ಅರುಣ್ ಕುಮಾರ್, ಪ್ರಭುರೆಡ್ಡಿ, ರಾಮಾಂಜಿ, ಉಪನ್ಯಾಸಕಿ ಕಮಲಾ ಹೆಗ್ಗಡೆ, ಶಿಕ್ಷಕಿಯರಾದ ಶಾರದಾ ಕೃಷ್ಣಮೂರ್ತಿ, ಚಿಕ್ಕರೆಡ್ಡಮ್ಮ, ಜಯಲಕ್ಷ್ಮಿ, ಆರತಿ, ರಕ್ಷಾ, ರೆಡ್ಡಮ್, ಮಮತಾ ರಾಣಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.