ಗುರುವಾರ , ಮೇ 26, 2022
30 °C

ಸಹಕಾರ ಸಂಘದ ಸೌಲಭ್ಯ ಪಡೆಯಲು ನ್ಯಾಯಾಧೀಶರಾದ ಅನುಪಮಾ ಡಿ. ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಲೂರು: ವಕೀಲರು ಮತ್ತು ಕಕ್ಷಿದಾರರು ನ್ಯಾಯಾಲಯ ಆವರಣದಲ್ಲಿ ಆರಂಭವಾಗಿರುವ ವಕೀಲರ ಸಂಘದ ಕ್ರೆಡಿಟ್‌ ಕೋಆಪರೇಟಿವ್ ಸೊಸೈಟಿಯಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನ್ಯಾಯಾಧೀಶರಾದ ಅನುಪಮಾ ಡಿ. ತಿಳಿಸಿದರು.

ಪಟ್ಟಣದ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ತಾಲ್ಲೂಕು ವಕೀಲರ ಸಂಘದ ಕ್ರೆಡಿಟ್‌ ಕೋಆಪರೇಟಿವ್ ಸೊಸೈಟಿಯ ಮಳಿಗೆ ಉದ್ಘಾಟಿಸಿ ಅವರು
ಮಾತನಾಡಿದರು.

ವಕೀಲರು ಮತ್ತು ಕಕ್ಷಿದಾರರು ನ್ಯಾಯಾಲಯಕ್ಕೆ ಅರ್ಜಿಗಳನ್ನು ಸಲ್ಲಿಸಲು ಬೇಕಾದಂತಹ ಸ್ಟಾಂಪ್ ಪೇಪರ್ ಹಾಗೂ ಇತರೆ ಲೇಖನ ಸಾಮಗ್ರಿಗಳನ್ನು ಬೆಂಗಳೂರು ಅಥವಾ ಕೋಲಾರಕ್ಕೆ ಹೋಗಿ ತರಬೇಕಾಗಿತ್ತು. ಗ್ರಾಹಕರು ತಮ್ಮ ಕಕ್ಷಿದಾರರಿಗೆ ಅನುಕೂಲವಾಗುವಂತೆ ವಕೀಲರ ಸಂಘವು ಸೊಸೈಟಿ ಆರಂಭಿಸಿದೆ. ಇಲ್ಲಿಯೇ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು. 

ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ಬಿ. ಕೃಷ್ಣಪ್ಪ ಮಾತನಾಡಿದರು.

ನ್ಯಾಯಾಧೀಶರಾದ ಲೋಕೇಶ್, ಪಾರ್ವತಮ್ಮ, ವಕೀಲರ ಸಂಘದ ಉಪಾಧ್ಯಕ್ಷ ಅಮರ್ ನಾರಾಯಣ್, ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ್, ಜಂಟಿ ಕಾರ್ಯದರ್ಶಿ ಅಂಗಸಗಿರಿಯಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು