ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಮಹಿಳಾ ದೌರ್ಜನ್ಯ ತಡೆಗಟ್ಟಲು ಸಲಹೆ

ಕೌಟುಂಬಿಕ ದೌರ್ಜನ್ಯ ಕಾಯ್ದೆ ಯೋಜನೆ –ಜಿಲ್ಲಾ ಮಟ್ಟದ ಪರಿಶೀಲನಾ ಸಭೆ
Last Updated 21 ಜೂನ್ 2022, 16:34 IST
ಅಕ್ಷರ ಗಾತ್ರ

ಕೋಲಾರ: ‘ಕೌಟುಂಬಿಕ ದೌರ್ಜನ್ಯ ಮತ್ತು ಹಿಂಸೆಗೊಳಗಾದ ಮಹಿಳೆಯರಿಗೆ ಸರಿಯಾದ ರೀತಿಯ ನ್ಯಾಯ ಒದಗಿಸಬೇಕು’ ಎಂದು ಜಿಲ್ಲಾಧಿಕಾರಿ ವೆಂಕಟ್‌ ರಾಜಾ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ, ಕೌಟುಂಬಿಕ ದೌರ್ಜನ್ಯ ಕಾಯ್ದೆ ಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯದಂತೆ ಪೊಲೀಸ್‌ ಅಧಿಕಾರಿಗಳು ಶ್ರಮಿಸಬೇಕು. ಯಾರಾದರೂ ದೂರು ನೀಡಿದಲ್ಲಿ ತಕ್ಷಣ ಅಂಥವರ ವಿರುದ್ಧ ಕಾನೂನಿನ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಿ. ಬಾಲ್ಯವಿವಾಹ ನಡೆಯಲು ಅನುಮತಿ ನೀಡುವವರ ವಿರುದ್ಧ ಎಫ್‍ಐಆರ್ ದಾಖಲಿಸಿ’ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್‌ ಕುಮಾರ್, ‘ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿದ ಹೆಣ್ಣು ಮಕ್ಕಳಿಗೆ ಮದುವೆ ಮಾಡುತ್ತಾರೆ. ಅಂಥವರಿಗೆ ಬಾಲ್ಯ ವಿವಾಹದ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಬಾಲ್ಯವಿವಾಹ ತಡೆಗಟ್ಟಲು ಮುಂದಾಗಬೇಕು. ಬಾಲ್ಯವಿವಾಹ ನಡೆಯುತ್ತಿದ್ದರೆ ಸಹಾಯವಾಣಿ 1098ಕ್ಕೆ ಕರೆ ಮಾಡಬಹುದು’ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಗದೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನಿರ್ದೇಶಕ ಮುದ್ದಣ್ಣ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ರಮೇಶ್, ಕೆಜಿಎಫ್ ವೃತ್ತ ನಿರೀಕ್ಷಕರಾದ ದಯಾನಂದ, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT