ಶನಿವಾರ, ಜುಲೈ 31, 2021
23 °C
ಶಾಲಾ ಆವರಣದಲ್ಲಿ ಸಸಿ ನೆಟ್ಟ ಮುಖಂಡರು

ಪಕ್ಷ ಸಂಘಟನೆ: ಬಿಜೆಪಿ ಕಾರ್ಯಕರ್ತರಿಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೇತಮಂಗಲ: ‘ದೇಶದ ಏಕತೆ, ಭವಿಷ್ಯಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿರುವಂತಹ ಬಿಜೆಪಿ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಆದರ್ಶಗಳನ್ನು ಪಕ್ಷದ ಕಾರ್ಯಕರ್ತರು ‍ಪಾಲಿಸಬೇಕು’ ಎಂದು ಯುವ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಸಂದೀಪ್ ಕುಮಾರ್ ಹೇಳಿದರು.

ನಗರದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯುವ ಮೋರ್ಚಾದ ಪದಾಧಿಕಾರಿಗಳು ಪಕ್ಷದ ಸಂಘಟನೆ ಮಾಡಬೇಕು. ಜೊತೆಗೆ ಸಮಾಜವನ್ನು ಕಾಪಾಡಬೇಕು ಎಂದು ಸಲಹೆ ನೀಡಿದರು.

ಮಾಜಿ ಶಾಸಕ ವೈ. ಸಂಪಂಗಿ ಮಾತನಾಡಿ, ಬಿಜೆಪಿ ಕಾರ್ಯಕರ್ತರು, ಯುವ ಮೋರ್ಚಾ ತಂಡದ ಯುವಕರು ಮುಂದಿನ ದಿನಗಳಲ್ಲಿ ಗ್ರಾ.ಪಂ., ತಾ.ಪಂ., ಮತ್ತು ಜಿ.ಪಂ. ಸದಸ್ಯರಾಗಬಹುದು. ಇನ್ನೂ ಉನ್ನತ ಸ್ಥಾನಗಳಿಸಬಹುದು. ಅದಕ್ಕಾಗಿ ಪ್ರಾಮಾಣಿಕವಾಗಿ ದುಡಿಯಬೇಕು ಎಂದು ಕಿವಿಮಾತು ಹೇಳಿದರು.

ಕೆಡಿಎ ಅಧ್ಯಕ್ಷೆ ಅಶ್ವಿನಿ ಸಂಪಂಗಿ, ಬೇತಮಂಗಲ ಗ್ರಾ.ಪಂ. ಅಧ್ಯಕ್ಷೆ ಮಮತಾ ಗಣೇಶ್, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಬಾಲಾಜಿ, ಕಾರ್ಯದರ್ಶಿ ಸುನಿಲ್ ಕುಮಾರ್, ಜಿಲ್ಲಾ ಒಬಿಸಿ ಕಾರ್ಯದರ್ಶಿ ಓಂ ಸುರೇಶ್, ಗ್ರಾಮಾಂತರ ಕಾರ್ಯದರ್ಶಿ ಹೇಮಾರೆಡ್ಡಿ, ಎಸ್‌ಸಿ ಮೋರ್ಚಾ ಅಧ್ಯಕ್ಷ ಬುಚೇಪಲ್ಲಿ ಕೃಷ್ಣಮೂರ್ತಿ, ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ಅರುಣ್, ಕಾರ್ಯದರ್ಶಿ ಅನಿಲ್, ಸುನಿಲ್, ಗ್ರಾ.ಪಂ. ಸದಸ್ಯರಾದ ಗಣೇಶ್, ಪ್ರಸಾದ್, ನಾರಾಯಣಸ್ವಾಮಿ, ಮುಖಂಡರಾದ ಜಕ್ಕರಸಕುಪ್ಪ, ಮುನಿಯಪ್ಪ ಹಾಜರಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.