ಶನಿವಾರ, ಫೆಬ್ರವರಿ 22, 2020
19 °C

ಶಾಲಾಭಿವೃದ್ಧಿಗೆ ಶ್ರಮಿಸಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಇತ್ತೀಚಿನ ದಿನಗಳಲ್ಲಿ ಶಾಲಾ ಅಭಿವೃದ್ಧಿ ಸಮಿತಿಗಳಲ್ಲಿ ರಾಜಕೀಯ ಹೆಚ್ಚಾಗಿದ್ದು, ಶೈಕ್ಷಣಿಕ ಪ್ರಗತಿಯ ಮೇಲೆ ಪರಿಣಾಮ ಬೀರುತ್ತಿದೆ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ವಿಷಾದ ವ್ಯಕ್ತಪಡಿಸಿದರು.

ತಾಲ್ಲೂಕಿನ ಕಾಡಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಕ್ಲಸ್ಟರ್ ಮಟ್ಟದ ಎಸ್‌ಡಿಎಂಸಿ ಸದಸ್ಯರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ‘ಶಾಲೆಗಳಲ್ಲಿ ಅಭಿವೃದ್ಧಿಯಲ್ಲಿ ಎಸ್‌ಡಿಎಂಸಿ ಪಾತ್ರ ಮಹತ್ವವಾದದು. ಸದಸ್ಯರು ಸೇವಾಮನೋಭಾವದಿಂದ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

‘ಸಮಿತಿ ಸದಸ್ಯರು ಸ್ಥಳೀಯ ದಾನಿಗಳನ್ನು ಗುರುತಿಸಿ ಅವರಿಂದ ಶಾಲಾ ಅಭಿವೃದ್ಧಿಗೆ ನೆರವು ಪಡೆಯಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರಿ ಜಾರಿಗೆ ತಂದಿರುವ ಯೋಜನೆಗಳ ಕುರಿತು ಪೋಷಕರಿಗೆ ಅರಿವು ಮೂಡಿಸಬೇಕು’ ಎಂದು ಹೇಳಿದರು.

‘ಗ್ರಾಮೀಣ ಪ್ರದೇಶದಲ್ಲಿ ಆಧುನಿಕತೆ ಬೆಳೆದರೂ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿ ಜೀವಂತವಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ಇಂತಹ ಪ್ರಕರಣಗಳನ್ನು ತಡೆಯಬೇಕು. ೧೪ ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯ ಶಿಕ್ಷಕ ಕೊಡಿಸಲು ಮುಂದಾಗಬೇಕು’ ಎಂದು ತಿಳಿಸಿದರು.

‘ಅನೇಕ ಕಾರಣಾಂತರಗಳಿಂದ ಮಕ್ಕಳು ಶಾಲೆಗೆ ಗೈರಾಗುತ್ತಿದ್ದಾರೆ. ಶಿಕ್ಷಕರು ಪೋಷಕರ ಮನೆ ಬಾಗಿಲಿಗೆ ಹೋಗಿ ಅರಿವು ಮೂಡಿಸಿದರೂ ಪ್ರಯೋಜನೆಯಾಗುತ್ತಿಲ್ಲ. ಇದಕ್ಕೆ ಎಸ್‌ಡಿಎಂಸಿ ಸದಸ್ಯರು ಕೈಜೋಡಿಸಿದರೆ ಶಾಲೆಬಿಟ್ಟ ಮಕ್ಕಳನ್ನು ಕರೆತರಲು ಅನುಕೂಲವಾಗುತ್ತದೆ’ ಎಂದು ಹೇಳಿದರು.

ಡಿಸಿಸಿ ಬ್ಯಾಂಕ್ ನಿದೇಶಕ ಸೋಮಣ್ಣ, ಮುಖ್ಯ ಶಿಕ್ಷಕ ಅಶ್ವಥ್ಥನಾರಾಯಣ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು