ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ | ವಿಷಮಶೀತ ಜ್ವರದ ಅಪಾಯ

ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ ಏರಿಕೆ
Last Updated 13 ಆಗಸ್ಟ್ 2020, 16:08 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 96 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 1,119ಕ್ಕೆ ಏರಿಕೆಯಾಗಿದೆ.

ವಿಷಮಶೀತ ಜ್ವರವು ಜಿಲ್ಲೆಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ವಿಷಮಶೀತ ಜ್ವರದಿಂದ ಬಳಲುತ್ತಿರುವ 77 ಮಂದಿಗೆ ಸೋಂಕು ಹರಡಿದೆ. ಉಳಿದಂತೆ ಸೋಂಕಿತರ ಸಂಪರ್ಕದಿಂದ 17 ಮಂದಿಗೆ ಸೋಂಕು ಬಂದಿದೆ.

ಮುಳಬಾಗಿಲು ತಾಲ್ಲೂಕಿನಲ್ಲಿ ಅತಿ ಹೆಚ್ಚು 30 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 29 ಮಂದಿಗೆ ವಿಷಮ ಶೀತ ಜ್ವರವಿದೆ. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಒಬ್ಬರಿಗೆ ಸೋಂಕು ಬಂದಿದೆ.

ಕೋಲಾರ ತಾಲ್ಲೂಕಿನಲ್ಲಿ ವಿಷಮಶೀತ ಜ್ವರವಿರುವ 17 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 10 ಮಂದಿಗೆ ಸೋಂಕು ಹರಡಿದೆ. ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 6 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಸೋಂಕು ಬಂದಿದೆ.

ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 5 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 3 ಮಂದಿಗೆ ಸೋಂಕು ಹರಡಿರುವುದು ಗೊತ್ತಾಗಿದೆ. ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 8 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 3 ಮಂದಿಗೆ ಸೋಂಕು ತಗುಲಿದೆ.

ಶ್ರೀನಿವಾಸಪುರ ತಾಲ್ಲೂಕಿನಲ್ಲಿ 12 ಮಂದಿಗೆ ಸೋಂಕು ಬಂದಿದ್ದು, ಇವರೆಲ್ಲರೂ ವಿಷಮಶೀತ ಜ್ವರದಿಂದ ಬಳಲುತ್ತಿದ್ದಾರೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT