ಗುರುವಾರ , ಸೆಪ್ಟೆಂಬರ್ 23, 2021
27 °C

ಮತದಾರರ ತೀರ್ಮಾನಕ್ಕೆ ನಾನು ಬದ್ಧ: ಮೈತ್ರಿ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿರುವ ಮುಖಂಡರ ವಿರುದ್ಧ ಕ್ರಮಕೈಗೊಳ್ಳಲು ಕೆಪಿಸಿಸಿಗೆ ವರದಿ ಸಲ್ಲಿಸಲಾಗುವುದು’ ಎಂದು ಮೈತ್ರಿ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಯಾವುದೇ ಚುನಾವಣೆಯಲ್ಲಿ ವ್ಯಕ್ತಿಗಿಂತ ಇಲ್ಲ ಪಕ್ಷ ದೊಡ್ಡದು. ವಿರೋಧಿ ಚಟುವಟಿಕೆ ನಡೆಸಿದ್ದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುತ್ತದೆ. ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರು ಹಾಗೂ ಬ್ಲಾಕ್ ಮಟ್ಟದ ಅಧ್ಯಕ್ಷರು ಸೇರಿ ಪಟ್ಟಿ ತಯಾರಿಸುತ್ತಾರೆ’ ಎಂದರು.

‘ಸದ್ಯ ಇಲ್ಲ ಪಕ್ಷದ ಮುಖಂಡರು ವಿರುದ್ಧ ಮಾಡಿದ್ದರೂ ಮತ ಹಾಕುವವರು ಸರಿಯಾಗೆ ಹಾಕಿರುತ್ತಾರೆ. ನಾನು ಜನಕ್ಕೆ ತೊಂದರೆ ಮಾಡಿದ್ದರೆ ಅವರು ನನಗೆ ಮತ ಹಾಕುತ್ತಿರಲಿಲ್ಲ. ಮತದಾನ ಮುಗಿದು ಹತ್ತು ದಿನ ಕಳೆದರೂ ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೇ ಗೆಲುವು ಎಂದು ಜನರೇ ಹೇಳುತ್ತಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರದಲ್ಲಿದೆ. ಅದೇ ರೀತಿ ಲೋಕಸಭಾ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಂಡಿದ್ದು, 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 21 ಹಾಗೂ ಜೆಡಿಎಸ್ 7 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಚುನಾವಣೆ ಸ್ಪರ್ಧೆ ಮಾಡಿದ್ದಾರೆ' ಎಂದರು.

‘ಮತದಾನ ಮುಗಿದಿದ್ದು, ಕಾಂಗ್ರೆಸ್‌ನಲ್ಲಿ ಪಕ್ಷಕ್ಕಿಂತ ಯಾವೂದೇ ವ್ಯಕ್ತಿ ದೊಡ್ಡವರಲ್ಲ. ಹಾಗಾಗಿ ಎಲ್ಲರೂ ಪಕ್ಷದ ಸಿದ್ದಾಂತಕ್ಕೆ ಬದ್ಧರಾಗಿ ಕೆಲಸ ಮಾಡಬೇಕು. ಚುನಾವಣೆ ಸಂದರ್ಭದಲ್ಲಿ ಕೆಲ ನಾಯಕರು ಬದಲಾಗಿದ್ದರೂ ಕಾರ್ಯಕರ್ತರು ಮತ್ತು ಮತದಾರರು ಬದಲಾಗಿಲ್ಲ. ಚುನಾವಣೆ ಸಂದರ್ಭದಲ್ಲಿ ಅಗಿರುವ ಬೆಳವಣಿಗೆಗಳ ಬಗ್ಗೆ ಕೆಪಿಸಿಸಿಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ವರದಿ ನೀಡುತ್ತದೆ’ ಎಂದು ಹೇಳಿದರು.

‘ಲೋಕಸಭಾ ಕ್ಷೇತ್ರ ಮೊದಲಿಂದಲೂ ಕಾಂಗ್ರೆಸ್ ಭದ್ರ ಕೋಟೆಯಾಗಿದೆ. ಕ್ಷೇತ್ರದ ಜನ 7 ಚುನಾವಣೆಗಳಿಂದ ಪಕ್ಷವನ್ನು ಬಿಟ್ಟುಕೊಟ್ಟಿಲ್ಲ ಎಂಬುವುದು ದಾಖಲಾರ್ಹವಾಗಿದೆ. ಈ ಬಾರಿಯು ಕಾಂಗ್ರೆಸ್‌ ಗೆಲ್ಲುತ್ತದೆ. ಇದೇ ರೀತಿ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿಗಳೇ ಜಯಗಳಿಸುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

‘ರಾಜ್ಯದಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಆಡಳಿತಾವಧಿಯನ್ನು ಪೂರ್ಣಗೊಳಿಸುವವರೆಗೂ ಕಾಂಗ್ರೆಸ್ ಪಕ್ಷ ಬೆಂಲಿಸಲಿದೆ. ಯಾವುದೇ ರೀರಿಯ ತಂತ್ರಗಾರಿಕೆ ರೂಪಿಸಲು ಮುಂದಾಗಲ್ಲ. ವಿಶ್ವಾಸಕ್ಕೆ ಧಕ್ಕೆಯುಂಟು ಮಾಡುವ ಕೆಲಸ ಕಾಂಗ್ರೆಸ್ ಎಂದಿಗೂ ಮಾಡಲ್ಲ’ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟಮುನಿಯಪ್ಪ, ಕಾಂಗ್ರೆಸ್ ಹಿಂದುಳಿದ ವಿಭಾಗದ ರಾಜ್ಯ ಘಟಕದ ಉಪಾಧ್ಯಕ್ಷ ಮಂಜುನಾಥ್, ನಗರಸಭೆ ಮಾಜಿ ಅಧ್ಯಕ್ಷ ಅತ್ತಾವುಲ್ಲಾ, ಪ್ರಚಾರ ಸಮಿತಿ ಅಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು