ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಂಬರೀಶ್‌ ಆಯ್ಕೆ

Last Updated 25 ಮೇ 2022, 15:16 IST
ಅಕ್ಷರ ಗಾತ್ರ

ಕೋಲಾರ: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ 29ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯ ಎನ್.ಅಂಬರೀಶ್ ಆಯ್ಕೆಯಾದರು.

ನಗರಸಭೆ ಅಧ್ಯಕ್ಷೆ ಶ್ವೇತಾ ಅಧ್ಯಕ್ಷತೆಯಲ್ಲಿ ಇಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಅಂಬರೀಶ್ ಅವರ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಲಾಯಿತು. ಒಟ್ಟು 14 ಮಂದಿ ನಗರಸಭಾ ಸದಸ್ಯರು ಸ್ಥಾಯಿ ಸಮಿತಿ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದರು. ನಂತರ ನಡೆದ ಚುನಾವಣೆಯಲ್ಲಿ 7 ಮಂದಿ ಸದಸ್ಯರು ಆಯ್ಕೆಯಾದರು. ಈ ಸದಸ್ಯರೆಲ್ಲಾ ಸೇರಿ ಅಂಬರೀಶ್ ಅವರನ್ನು ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಅವಿರೋಧ ಆಯ್ಕೆ ಮಾಡಿದರು.

6 ತಿಂಗಳ ಹಿಂದೆ ಖಾಲಿಯಾಗಿದ್ದ ಸ್ಥಾಯಿ ಸಮಿತಿ ಅಧ್ಯಕ್ಷಗಾದಿಗೆ ಸದಸ್ಯರಲ್ಲಿ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ನಡೆದ ಚುನಾವಣೆಯಲ್ಲಿ ಅಂಬರೀಶ್‌ ಅವರಿಗೆ ಅಧ್ಯಕ್ಷಗಾದಿಯ ಪಟ್ಟ ಒಲಿಯಿತು.

‘ನನ್ನ ಆಯ್ಕೆಗೆ ಸಹಕರಿಸಿದ ಶಾಸಕ ರಮೇಶ್‌ಕುಮಾರ್, ವಿಧಾನ ಪರಿಷತ್‌ ಸದಸ್ಯರಾದ ನಜೀರ್ ಆಹಮ್ಮದ್, ಅನಿಲ್‌ಕುಮಾರ್ ಹಾಗೂ ನಗರಸಭೆ ಅಧ್ಯಕ್ಷೆ ಶ್ವೇತಾ, ಸದಸ್ಯ ಮುಬಾರಕ್ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ನಗರದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುತ್ತೇನೆ’ ಎಂದು ಅಂಬರೀಶ್‌ ಹೇಳಿದರು.

‘ನಗರಕ್ಕೆ ಸಮರ್ಪಕ ಕುಡಿಯುವ ನೀರಿನ ಪೂರೈಕೆ, ರಸ್ತೆ ಮತ್ತು ಚರಂಡಿಗಳ ನಿರ್ಮಾಣ ಸೇರಿದಂತೆ ನಗರದ ಅಭಿವೃದ್ಧಿಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ಎಲ್ಲಾ ಸದಸ್ಯರನ್ನು ವಿ‌ಶ್ವಾಸಕ್ಕೆ ತೆಗೆದುಕೊಂಡು ಜನರ ಸಮಸ್ಯೆಗೆ ಸ್ಪಂದಿಸುತ್ತೇನೆ’ ಎಂದು ಭರವಸೆ ನೀಡಿದರು.

ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT