ಮಾಲೂರು: ‘ಡಾ.ಬಿ.ಆರ್. ಅಂಬೇಡ್ಕರ್ ಯಾವುದೇ ಒಂದು ಸಮುದಾಯಕ್ಕೆ ಸಂವಿಧಾನ ರಚನೆ ಮಾಡಿಲ್ಲ. ಎಲ್ಲಾ ಸಮುದಾಯದವರ ಏಳಿಗೆಗೆ ದುಡಿದ ಮಹಾನಾಯಕ’ ಎಂದು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದರು.

ಪಟ್ಟಣದ 4ನೇ ವಾರ್ಡಿನ ಅಂಬೇಡ್ಕರ್ ಕಾಲೊನಿಯಲ್ಲಿ ಬುಧವಾರ ಡಾ.ಬಿ.ಆರ್. ಅಂಬೇಡ್ಕರ್ ಯುವಕ ಸಂಘದಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದರು.

ದೇಶದಲ್ಲಿ ಪ್ರತಿಯೊಬ್ಬರಿಗೂ ಸಮಾನತೆಯ ಬದುಕು ಸಾಗಿಸುವ ನಿಟ್ಟಿನಲ್ಲಿ ಅಂಬೇಡ್ಕರ್ ಅವರು ಸಂವಿಧಾನವನ್ನು ರಚನೆ ಮಾಡಿದ್ದಾರೆ. ಅವರು ಯಾವುದೇ ಒಂದು ಸಮುದಾಯಕ್ಕೆ ಸಂವಿಧಾನ ರಚನೆ ಮಾಡಿಲ್ಲ. ಎಲ್ಲಾ ಸಮುದಾಯದವರು ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಮೀಸಲಾತಿಯಲ್ಲಿ ಅನುಕೂಲ ಕಲ್ಪಿಸುವಂತೆ ರಚನೆ ಮಾಡಿದ್ದಾರೆ. ನಾನು ಶಾಸಕನಾಗಿ ಆಯ್ಕೆಯಾಗಬೇಕಾದರೆ ಸಂವಿಧಾನದ ಮೀಸಲಾತಿಯಿಂದ ಸಾಧ್ಯವಾಯಿತು ಎಂದು ತಿಳಿಸಿದರು.

ಅಂಬೇಡ್ಕರ್ ಅವರ ಪುತ್ಥಳಿಗಳನ್ನು ಕೇವಲ ದಲಿತ ಕಾಲೊನಿಗಳಲ್ಲಿ ಮಾತ್ರ ನಿರ್ಮಾಣ ಮಾಡುತ್ತಿರುವುದು ಶೋಚನೀಯ ಸಂಗತಿ. ಎಲ್ಲಾ ಸಮುದಾಯಗಳು ಜೀವನ ಸಾಗಿಸುವಂತಹ ಸ್ಥಳಗಳಲ್ಲಿ ಪುತ್ಥಳಿಯನ್ನು ಎಲ್ಲಾ ಸಮುದಾಯದವರು ಒಗ್ಗೂಡಿ ನಿರ್ಮಾಣ ಮಾಡಬೇಕು. ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.

ಪುರಸಭೆ ಅಧ್ಯಕ್ಷ ಮುರಳೀಧರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಪ್ರದೀಪ್ ರೆಡ್ಡಿ, ಬಿಜೆಪಿ ಮುಖಂಡ ಹೂಡಿ ವಿಜಯಕುಮಾರ್, ಪುರಸಭೆ ಮಾಜಿ ಅಧ್ಯಕ್ಷ ಸಿ. ಲಕ್ಷ್ಮಿನಾರಾಯಣ್, ಎಎಸ್ಎಸ್ಕೆ ಅಧ್ಯಕ್ಷ ಕೆ.ಎಂ. ಸಂದೇಶ್, ರಾಜ್ಯ ಸಂಚಾಲಕ ಪಿ.ಎನ್. ದಾಸ್ , ಡಿಎಸ್ಎಸ್ ತಾಲ್ಲೂಕು ಸಂಚಾಲಕ ಎಸ್.ಎಂ. ವೆಂಕಟೇಶ್, ಪುರಸಭಾ ಸದಸ್ಯರಾದ ಮಂಜುನಾಥ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.