ಬಂಗಾರಪೇಟೆ: ತಾಲ್ಲೂಕಿನ ಕಾರಹಳ್ಳಿ ಅಂಗನವಾಡಿ ಕೇಂದ್ರ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತಹಶೀಲ್ದಾರ್ ಎಸ್.ವೆಂಕಟೇಶಪ್ಪ ಭೇಟಿ ನೀಡಿ ಮಕ್ಕಳ ಕಲಿಕಾ ಮಟ್ಟ ಪರಿಶೀಲಿಸಿದರು.

ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ, ಶಾಲಾ ಪೂರ್ವ ಶಿಕ್ಷಣ, ಆರೋಗ್ಯ ತಪಾಸಣೆ, ಲಸಿಕೆ ಮತ್ತು ಪೋಷಣೆ ಮತ್ತು ಆರೋಗ್ಯ ಸಂಬಂಧಿತ ಮಾಹಿತಿ ಪರೀಶೀಲನೆ ನಡೆಸಿದರು. ಸಕಾಲದಲ್ಲಿ ಎಲ್ಲ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲು ಸೂಚಿಸಿದರು. ಅದೇ ರೀತಿಯಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ಮತ್ತು ಆರೋಗ್ಯ ಸೇವೆ ಒದಗಿಸುವ ಮೂಲಕ ಅಪೌಷ್ಟಿಕತೆ ನಿರ್ಮೂಲನೆ ಮಾಡಲು ಶ್ರಮಿಸಬೇಕು ಎಂದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ಮಕ್ಕಳು ಮತ್ತು ಶಿಕ್ಷಕರ ಹಾಜರಾತಿ ಪರೀಶೀಲನೆ ಮಾಡಿ ಗೈರು ಹಾಜರಾಗುವ ಮಕ್ಕಳ ಮಾಹಿತಿ ಪಡೆದರು.

ಮಕ್ಕಳೊಂದಿಗೆ ಉತ್ಸಾಹದಿಂದ ಚಟುವಟಿಕೆಗಳಲ್ಲಿ ಭಾಗವಹಿಸಿದರು. ಶಿಕ್ಷಕರಾದ ಕವಿತಾ, ಸಹನಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುನಿರಾಜು, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.