ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ- ಬೆಳೆ ವಿಮೆ ಯೋಜನೆಗೆ ಅರ್ಜಿ ಆಹ್ವಾನ

Last Updated 19 ಮೇ 2022, 11:02 IST
ಅಕ್ಷರ ಗಾತ್ರ

ಕೋಲಾರ: 2022ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಯೋಜನೆ ಮರು ವಿನ್ಯಾಸಗೊಳಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಎಂ.ಗಾಯತ್ರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ವ್ಯಾಪ್ತಿಗೆ ಸೇರಿಸಲಾಗಿದೆ. ಬಂಗಾರಪೇಟೆ, ಕೆಜಿಎಫ್, ಕೋಲಾರ, ಮಾಲೂರು ಮತ್ತು ಮುಳಬಾಗಿಲು ತಾಲ್ಲೂಕನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಹೇಳಿದ್ದಾರೆ.‌

ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮರು ವಿನ್ಯಾಸಗೊಳಿಸಿದೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಮಾವು ಬೆಳೆಗೆ ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ ₹ 80 ಸಾವಿರ ಆಗಿರುತ್ತದೆ. ರೈತರು ಪಾವತಿಸಬೇಕಾದ ಶೇ 5ರ ವಿಮಾ ಕಂತಿನ ಮೊತ್ತ ₹ 4 ಸಾವಿರ ಆಗಿರುತ್ತದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಟೊಮೆಟೊ ಬೆಳೆಗೆ ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ ₹ 1.18 ಲಕ್ಷ ಆಗಿರುತ್ತದೆ. ರೈತರು ಪಾವತಿಸಬೇಕಾದ ಶೇ 5ರ ವಿಮಾ ಕಂತಿನ ಮೊತ್ತ ₹ 5,900 ಇದೆ ಎಂದು ಮಾಹಿತಿ ನೀಡಿದ್ದಾರೆ.

ಬೆಳೆ ಸಾಲ ಪಡೆದ ರೈತರು ಹಾಗೂ ಸಾಲ ಪಡೆಯದ ರೈತರು ವಿಮಾ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದು. ಆಯಾ ತಾಲ್ಲೂಕಿಗೆ ಸಂಬಂಧಪಟ್ಟ ವಿಮೆ ಮಾಡಿಸುವ ರೈತರು ನಿಗದಿತ ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಆಧಾರ ಕಾರ್ಡ್ ನಕಲು ಪ್ರತಿ, ಸ್ವಯಂ ಘೋಷಿತ ಬೆಳೆ ವಿವರ ಲಗತ್ತಿಸಿ ಅಧಿಕೃತ ರಾಷ್ಟ್ರೀಯ ಬ್ಯಾಂಕ್‌ಗಳಲ್ಲಿ ಜುಲೈ 31 ರೊಳಗೆ ಹೆಸರು ನೋಂದಾಯಿಸಬೇಕು ಎಂದು ಸೂಚಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಬಂಗಾರಪೇಟೆ ತಾಲ್ಲೂಕು ಹಿರಿಯ ಸಹಾಯಕ ನಿರ್ದೇಶಕರ ಮೊಬೈಲ್‌ ಸಂಖ್ಯೆ 9448949104ಕ್ಕೆ, ಕೋಲಾರ ತಾಲ್ಲೂಕಿನ ರೈತರು 9964749681 ಸಂಖ್ಯೆಗೆ, ಮಾಲೂರು ತಾಲ್ಲೂಕಿನ ರೈತರು 9036043217ಕ್ಕೆ, ಮುಳಬಾಗಿಲು ತಾಲ್ಲೂಕು ರೈತರು 9845024906ಕ್ಕೆ, ಶ್ರೀನಿವಾಸಪುರ ತಾಲ್ಲೂಕು ರೈತರು 9980341561ಕ್ಕೆ ಕರೆ ಮಾಡಬಹುದು. ಆಯಾ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿಗಳು ಹಾಗೂ ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT