ಸೋಮವಾರ, ಆಗಸ್ಟ್ 2, 2021
28 °C

ಕಾಲೇಜು ಆರಂಭಕ್ಕೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯ ಜಿಲ್ಲೆಗಳಲ್ಲಿ ಹೊಸ ಕಾಲೇಜು ಹಾಗೂ ವಿವಿಧ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಸಂಯೋಜನೆ ಆರಂಭಕ್ಕೆ ಶಿಕ್ಷಣ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಕೆ.ಆರ್.ಪುರ, ಸಿ.ವಿ.ರಾಮನ್‌ನಗರ, ಪುಲಿಕೇಶಿನಗರ, ಮಹದೇವಪುರ, ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಲೇಜು ಆರಂಭಿಸಬಹುದು ಎಂದು ವಿ.ವಿ ಕುಲ ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಲೇಜುಗಳು ಮತ್ತು ಅರ್ಹ ಶಿಕ್ಷಣ ಸಂಸ್ಥೆಗಳು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮದ ಪ್ರಕರಣ 59 ಮತ್ತು 62ರಡಿ ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಆದೇಶದ ಅನ್ವಯ ಆನ್‌ಲೈನ್‌ ಮೂಲಕ ಕೋರ್ಸ್‌ಗಳ ಸಂಯೋಜನೆ ಮುಂದುವರಿಕೆ, ಹೊಸ ಸಂಯೋಜನೆಗೆ ಅರ್ಜಿ ಸಲ್ಲಿಸಬಹುದು. ದಂಡ ಶುಲ್ಕವಿಲ್ಲದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಅರ್ಜಿಯ ಮುದ್ರಿತ ಪ್ರತಿಗಳನ್ನು ಆ.8ರೊಳಗೆ ವಿ.ವಿಗೆ ಸಲ್ಲಿಸಬೇಕು ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು