ಭಾನುವಾರ, ಅಕ್ಟೋಬರ್ 24, 2021
20 °C

ಶಾಲಾ ಸಂಕೇತಕ್ಕೆ ಅರ್ಜಿ ಸಲ್ಲಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ ಆರಂಭಗೊಂಡಿರುವ ಸರ್ಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಅನುದಾನರಹಿತ ಶಾಲೆಗಳು ಮೊದಲ ಬಾರಿಗೆ ವಿದ್ಯಾರ್ಥಿಗಳನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಾಯಿಸಲು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಶಾಲಾ ಸಂಕೇತ ಪಡೆಯಲು ಅ.25ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಎಸ್ಸೆಸ್ಸೆಲ್ಸಿ ಆರಂಭಗೊಂಡಿರುವ ಶಾಲೆಗಳು ಶಾಲಾ ಸಂಕೇತ ಪಡೆಯುವುದು ಕಡ್ಡಾಯ. ಈ ಶಾಲೆಗಳು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪ ನಿರ್ದೇಶಕರ ಮೂಲಕ ಪ್ರಸ್ತಾವವನ್ನು ಭೌತಿಕವಾಗಿ ಮಂಡಳಿಗೆ ಸಲ್ಲಿಸಿ ಶಾಲಾ ಸಂಕೇತ ಪಡೆಯುವುದು ಈವರೆಗೂ ರೂಡಿಯಲ್ಲಿತ್ತು. ಆದರೆ, 2020–21ನೇ ಸಾಲಿನಿಂದ ಹೊಸ ಶಾಲಾ ಸಂಕೇತ ಪಡೆಯಲು ಶಾಲಾ ಆಡಳಿತ ಮಂಡಳಿಯು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸುವನ್ನು ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರೌಢ ಶಿಕ್ಷಣ ಮಂಡಳಿಯ ವೆಬ್‌ಸೈಟ್‌ನಲ್ಲಿ ಶಾಲಾ ಮಂಜೂರಾತಿ ಪತ್ರ ಹಾಗೂ ಶಾಲಾ ಮಾನ್ಯತೆ ನವೀಕರಣದ ಆದೇಶದ ಪ್ರತಿಗಳನ್ನು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದಕ್ಕೂ ಮುನ್ನ ಪಿಡಿಎಫ್ ಮಾದರಿಯಲ್ಲಿ ಸ್ಕ್ಯಾನ್ ಮಾಡಿಕೊಂಡು ವೆಬ್‌ಸೈಟ್‌ನಲ್ಲಿ ನೀಡಿರುವ ಮಾಹಿತಿಗೆ ಅನುಗುಣವಾಗಿ ನ.24 ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.