ಮಾಲೂರು: ಗ್ಯಾರಂಟಿ ಜೊತೆಯಲ್ಲಿ ತಾಲ್ಲೂಕಿನ ಅಭಿವೃದ್ಧಿಯಲ್ಲಿಯೂ ಮಾದರಿಯಾಗಬೇಕು ಎನ್ನುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ಹಾಗೂ ನೂತನ ಅಧ್ಯಕ್ಷ ಮತ್ತು ಸದಸ್ಯರ ಪದಗ್ರಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷರನ್ನಾಗಿ ಎಂ.ಆಂಜಿನಪ್ಪ ಹಾಗೂ ಉಪಾಧ್ಯಕ್ಷರನ್ನು, ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ತಾಲ್ಲೂಕಿನ ಫ್ಲೈಓವರ್, ನಾಲ್ಕು ಪಥದ ರಸ್ತೆ, ಬಸ್ ನಿಲ್ದಾಣ, ಕೆರೆ ಅಭಿವೃದ್ಧಿ, ರಸ್ತೆಗಳ ಅಭಿವೃದ್ಧಿ, ಇಂದಿರಾ ಕ್ಯಾಂಟಿನ್, ಮಾಸ್ತಿ ಬಸ್ ನಿಲ್ದಾಣ, ವಸತಿ ನಿಲಯ, ಚಿಕ್ಕತಿರುಪತಿ ದೇವಾಲಯ ಅಭಿವೃದ್ಧಿ ಸೇರಿದಂತೆ ಹಲವು ಕಾರ್ಯಗಳಿಗೆ ಪ್ರಸ್ತುತ ₹ 2.200ಕೋಟಿ ಅನುದಾನ ಮಂಜುರಾಗಿದೆ ಎಂದರು.

ವಿಧಾನ ಪರೀಷತ್ ಸದಸ್ಯ ಎಂ.ಎಲ್. ಅನೀಲ್ ಕುಮಾರ್ ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ 14 ಜನರಿಗೆ ಆದೇಶ ಪತ್ರಗಳನ್ನುವಿತರಿಸಲಾಯಿತು. ಮಾಜಿ ಶಾಸಕ ಎ.ನಾಗರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ರತ್ನಮ್ಮ ನಂಜೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ್, ದರ್ಖಾಸ್ತು ಸಮಿತಿ ಅಧ್ಯಕ್ಷ ಹನುಮಂತಪ್ಪ, ನಾರಾಯಣಸ್ವಾಮಿ, ತಾಲ್ಲೂಕು ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಜಯನರಸಿಂಹ, ಮದುಸೂದನ್, ಪುರಸಭಾಧ್ಯಕ್ಷೆ ಕೋಮಲಾ ನಾರಾಯಣ್, ಸ್ಥಾಯಿ ಸಮಿತಿ ಅಧ್ಯಕ್ಷ ರಾಜಪ್ಪ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಹಮದ್ ನಯುಂ ಉಲ್, ಯುವ ಮುಖಂಡ ಸುನೀಲ್ ನಂಜೇಗೌಡ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.