ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಅರಸು ಜಯಂತಿ ಸರಳವಾಗಿರಲಿ

Last Updated 12 ಆಗಸ್ಟ್ 2021, 14:39 IST
ಅಕ್ಷರ ಗಾತ್ರ

ಕೋಲಾರ: ‘ಎಲ್ಲೆಡೆ ಕೋವಿಡ್‌ ಆತಂಕ ಹೆಚ್ಚಿದೆ. ಹೀಗಾಗಿ ಈ ಬಾರಿ ದೇವರಾಜ ಅರಸು ಜಯಂತಿ ಸರಳವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹಾ ತಿಳಿಸಿದರು.

ದೇವರಾಜ ಅರಸು ಜಯಂತಿ ಆಚರಣೆ ಸಂಬಂಧ ಇಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಸಮಾಜಕ್ಕೆ ಸೇವೆ ಸಲ್ಲಿಸಿದ ಮಹನೀಯರ ಜಯಂತಿ ಆಚರಿಸುವುದು ಮತ್ತು ಅವರ ಸಾಧನೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಕರ್ತವ್ಯ’ ಎಂದರು.

‘ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ತಗುಲುವ ಸಾಧ್ಯತೆ ಹೆಚ್ಚಿದೆ. ಆದ ಕಾರಣ ಕಾರ್ಯಕ್ರಮದಲ್ಲಿ ಮಕ್ಕಳನ್ನು ಸೇರಿಸಬಾರದು ಮತ್ತು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಚಟುವಟಿಕೆ ನಡೆಸಬಾರದು. 40ಕ್ಕಿಂತ ಹೆಚ್ಚು ಜನ ಸೇರದಂತೆ ಜಯಂತಿ ಆಚರಿಸಬೇಕು. ಜತೆಗೆ ಕಾರ್ಯಕ್ರಮದಲ್ಲಿ ಕೋವಿಡ್‌ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಸೂಚಿಸಿದರು.

‘ಅರಸು ಪುತ್ಥಳಿ ಸ್ಥಾಪನೆಗೆ ಹಿಂದಿನ ವರ್ಷ ಜಿಲ್ಲಾಡಳಿತದಿಂದ ಹಣ ಮಂಜೂರು ಮಾಡಲಾಗಿತ್ತು. ಆದರೆ, ಇನ್ನೂ ಪುತ್ಥಳಿ ಸ್ಥಾಪನೆ ಕೆಲಸ ಪೂರ್ಣಗೊಂಡಿಲ್ಲ. ಹಿಂದುಳಿದ ವರ್ಗಗಳ ಹರಿಕಾರ ದೇವರಾಜ ಅರಸು ಅವರ ಜಯಂತಿಯನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮಾಸ್ಕ್ ಧರಿಸಿ ಮತ್ತು ಅಂತರ ಕಾಯ್ದುಕೊಂಡು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಬೇಕು’ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರಾಜಣ್ಣ, ಹಿಂದುಳಿದ ವರ್ಗಗಳ ಮುಖಂಡರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT