ಬುಧವಾರ, ಮಾರ್ಚ್ 29, 2023
27 °C
ಆಕಾಂಕ್ಷಿಗಳಿಂದ ‘ಕೋಲಾರಮ್ಮ’ ಹೆಸರಲ್ಲಿ ಆಣೆ

ಆಕಾಂಕ್ಷಿಗಳಿಂದ ಕೋಲಾರಮ್ಮನ ಮೇಲೆ ಆಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಜಿಲ್ಲೆಯ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಯಾರನ್ನೇ ಅಭ್ಯರ್ಥಿ ಮಾಡಿದರೂ ಪಕ್ಷಕ್ಕೆ ದ್ರೋಹ ಬಗೆಯಬಾರದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ, ರೆಸಾರ್ಟ್‌ವೊಂದರಲ್ಲಿ ಆಕಾಂಕ್ಷಿಗಳಿಂದ ‘ಕೋಲಾರಮ್ಮ’ ದೇವತೆ ಹೆಸರಲ್ಲಿ ಆಣೆ ಮಾಡಿಸಿದ್ದಾರೆ.

ಈ ಕ್ಷೇತ್ರದಲ್ಲಿ ಮಾಜಿ ಶಾಸಕ ಬಿ.ಪಿ. ವೆಂಕಟಮುನಿಯಪ್ಪ, ಅವರ ಪುತ್ರ ಬಿ.ವಿ. ಮಹೇಶ್‌, ಮಾಜಿ ಶಾಸಕ ಎಂ. ನಾರಾಯಣಸ್ವಾಮಿ ಸೇರಿದಂತೆ ಆರು ಮಂದಿ ಟಿಕೆಟ್‌ ಆಕಾಂಕ್ಷಿಗಳಿ ದ್ದಾರೆ. ಟಿಕೆಟ್‌ ಸಿಗದಿದ್ದರೆ ಬೇರೆ ಪಕ್ಷಕ್ಕೆ ಹೋಗುವುದಾಗಿಯೂ ಬೆಂಬಲಿಗ ರೊಂದಿಗೆ ಹೇಳಿಕೊಂಡಿದ್ದಾರೆ.

ಈ ವಿಚಾರ ಗೊತ್ತಾಗುತ್ತಿದ್ದಂತೆ ಗುರುವಾರ ಸಂಜೆ ಎಲ್ಲಾ ಆಕಾಂಕ್ಷಿಗಳನ್ನು ರೆಸಾರ್ಟ್‌ಗೆ ಕರೆದು ಆಣೆ ಮಾಡಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು