ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳು–ರೋಗಿಗಳಿಗೆ ನೆರವು: ಎಂ.ಗೋವಿಂದಗೌಡ

Last Updated 9 ಏಪ್ರಿಲ್ 2021, 16:07 IST
ಅಕ್ಷರ ಗಾತ್ರ

ಕೋಲಾರ: ‘ಬಡ ವಿದ್ಯಾರ್ಥಿಗಳು ಹಾಗೂ ರೋಗಿಗಳಿಗೆ ಟ್ರಸ್ಟ್ ಮೂಲಕ ಕೈಲಾದಷ್ಟು ಆರ್ಥಿಕ ನೆರವು ನೀಡಲಾಗುವುದು’ ಎಂದು ಮನ್ವಂತರ ಜನ ಸೇವಾ ಟ್ರಸ್ಟ್ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ತಿಳಿಸಿದರು.

ನಗರದ ಸರ್ಕಾರಿ ಮಹಿಳಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಅಕ್ಷತಾ ಅವರ ವಿದ್ಯಾಭ್ಯಾಸಕ್ಕೆ ಇಲ್ಲಿ ಶುಕ್ರವಾರ ಹಣಕಾಸು ನೆರವು ನೀಡಿ ಮಾತನಾಡಿ, ‘ಕಳೆದ 2 ದಶಕದಿಂದ ಬಡವರಿಗೆ ಸಹಾಯ ಮಾಡುತ್ತಿದ್ದೇನೆ. 3 ವರ್ಷಗಳಿಂದ ಮನ್ವಂತರ ಜನ ಸೇವಾ ಟ್ರಸ್ಟ್ ಮೂಲಕ ಬಡ ವಿದ್ಯಾರ್ಥಿಗಳು, ಕಲಾವಿದರು ಹಾಗೂ ಅಸಹಾಯಕರಿಗೆ ಸಹಾಯಹಸ್ತ ಚಾಚಿದ್ದೇವೆ’ ಎಂದು ಹೇಳಿದರು.

‘ಟ್ರಸ್ಟ್‌ನ ನೆರವಿಗೆ ಅರ್ಹರಿರುವ ಫಲಾನುಭವಿಗಳನ್ನು ಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ ಅನಂತರಾಮ್‌ ಗುರುತಿಸುತ್ತಾರೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದುವರಿಯಲು ಹೆಚ್ಚಿನ ಆದ್ಯತೆ ನೀಡುತ್ತೇವೆ’ ಎಂದು ಭರವಸೆ ನೀಡಿದರು.

‘ಕೋವಿಡ್‌ನಿಂದ ಬಡ ಜನರಿಗೆ ಹೆಚ್ಚಿನ ತೊಂದರೆಯಾಗಿದೆ. ಹಿಂದಿನ ವರ್ಷ ಕೊರೊನಾ ಆತಂಕದ ನಡುವೆಯೂ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಕಲ್ಪಿಸಲಾಗಿದೆ. ಈ ವರ್ಷ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT