ಬ್ಯಾಂಕ್ ಖಾತೆಗೆ ಆಧಾರ್ ಜೋಡಿಸಿ: ಶ್ರೀನಿವಾಸ್
ಬಂಗಾರಪೇಟೆ: ತಾಲ್ಲೂಕಿನಲ್ಲಿ 2020-21ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಅಥವಾ ಶುಲ್ಕ ವಿನಾಯಿತಿಗೆ ಅರ್ಜಿ ಸಲ್ಲಿಸಿದ್ದು, ಶುಲ್ಕ ವಿನಾಯಿತಿ ಮರುಪಾವತಿ ಹಣ ಮಂಜೂರಾಗಿದೆ.
ಆದರೆ, ಕೆಲವು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದ ಕಾರಣ ಹಣ ಸಂದಾಯ ಸಾಧ್ಯವಾಗಿರುವುದಿಲ್ಲ. ಹಾಗಾಗಿ, ಜ. 31ರ ಒಳಗೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಬೇಕು ಎಂದು ಇಲಾಖೆಯ ಇನ್ಸ್ಪೆಕ್ಟರ್ ಶ್ರೀನಿವಾಸ್ ತಿಳಿಸಿದ್ದಾರೆ.
ಜ. 31ರೊಳಗೆ ಆಧಾರ್ ಜೋಡಣೆ ಮಾಡದಿದ್ದರೆ ಶುಲ್ಕ ಮರುಪಾವತಿ ಮಂಜೂರಾತಿ ಕಾರ್ಯಕ್ರಮದಿಂದ ಸದರಿ ವಿದ್ಯಾರ್ಥಿಗಳ ಅರ್ಜಿಯನ್ನು ಕಾಯಂ ಆಗಿ ಕೈಬಿಡಲಾಗುವುದು ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಮೊಬೈಲ್ 84535 24606 ಸಂಪರ್ಕಿಸಬಹುದು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.