ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಜಿಎಫ್‌: ಕರ್ನಾಟಕ ಒನ್ ಕೇಂದ್ರದ ಮೇಲೆ ದಾಳಿ

Published 13 ಫೆಬ್ರುವರಿ 2024, 14:14 IST
Last Updated 13 ಫೆಬ್ರುವರಿ 2024, 14:14 IST
ಅಕ್ಷರ ಗಾತ್ರ

ಕೆಜಿಎಫ್‌: ರಾಬರ್ಟಸನ್‌ಪೇಟೆಯ ಕರ್ನಾಟಕ ಒನ್ ಕೇಂದ್ರದಲ್ಲಿ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಹೆಚ್ಚಿಗೆ ಹಣ ಪಡೆಯುತ್ತಿದ್ದ ಆರೋಪದ ಮೇಲೆ ತಹಶೀಲ್ದಾರ್ ಕೆ.ನಾಗವೇಣಿ ಕೇಂದ್ರದ ಮೇಲೆ ಸೋಮವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಕೇಂದ್ರದಲ್ಲಿ ರಾಜ್ಯ ಸರ್ಕಾರ ನೀಡಿರುವ ಸವಲತ್ತುಗಳಿಗೆ ನಿಗದಿಗಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂದು ದೂರುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ದಿಢೀರನೇ ಕೇಂದ್ರಕ್ಕೆ ಭೇಟಿ ನೀಡಿದ ತಹಶೀಲ್ದಾರ್ ತಮ್ಮ ಪರಿಚಯ ಹೇಳಿಕೊಳ್ಳದೆ ಸಿಬ್ಬಂದಿ ಮತ್ತು ಸೇವೆ ಪಡೆಯಲು ಬಂದಿದ್ದವರಿಂದ ಮಾಹಿತಿ ಪಡೆದರು.

ನಿಗದಿಗಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವುದಾಗಿ ನೆರೆದಿದ್ದವರು ತಿಳಿಸಿದರು. ಕೂಡಲೇ ರೆವಿನ್ಯೂ ಇನ್‌ಸ್ಪೆಕ್ಟರ್ ರಘುರಾಮಸಿಂಗ್ ಮತ್ತು ಗ್ರಾಮ ಲೆಕ್ಕಾಧಿಕಾರಿ ವಿನೀತ್ ಸ್ಥಳಕ್ಕೆ ಧಾವಿಸಿ ಮಹಜರ್ ನಡೆಸಿದರು. ಅವರ ವರದಿಯ ಹಿನ್ನೆಲೆಯಲ್ಲಿ ಕೇಂದ್ರದ ಮೇಲೆ ಕ್ರಮ ಕೈಗೊಳ್ಳಲು ತಹಶೀಲ್ದಾರರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT