ಪಿಡಿಒ ಮೇಲೆ ಹಲ್ಲೆ: ಆರೋಪಿ ಬಂಧನಕ್ಕೆ ಒತ್ತಾಯ

ಮಂಗಳವಾರ, ಏಪ್ರಿಲ್ 23, 2019
33 °C

ಪಿಡಿಒ ಮೇಲೆ ಹಲ್ಲೆ: ಆರೋಪಿ ಬಂಧನಕ್ಕೆ ಒತ್ತಾಯ

Published:
Updated:
Prajavani

ಕೋಲಾರ: ತಾಲ್ಲೂಕಿನ ಹರಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮಕೃಷ್ಣ ಮೇಲೆ ಹಲ್ಲೆ ನಡೆಸಿರುವ ಆರೋಪಿ ಎಸ್.ನಾರಾಯಣಸ್ವಾಮಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರೋಹಿಣಿ ಕಟೋಚ್ ಸೆಪಟ್ ಅವರಿಗೆ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಂಪರಾಜ್ ಮತನಾಡಿ, ‘ರಾಮಕೃಷ್ಣಪ್ಪ ಕಾರ್ಯನಿಮಿತ್ತ ನಗರದ ಜಿಲ್ಲಾ ಪಂಚಾಯಿತಿ ಕಚೇಗೆ ಇಚ್ಚೀಗೆ ಬಂದಿದ್ದ. ಆ ಸಂದರ್ಭದಲ್ಲಿ ಕಚೇರಿ ಆವರಣದಲ್ಲಿದ್ದ ಎಸ್.ನಾರಾಯಣಸ್ವಾಮಿ ಹಳೇ ವೈಷಮ್ಯದಿಂದ ಮಾತಿನ ಚಕಮಕಿ ನಡೆಸಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾನೆ’ ಎಂದು ಆರೋಪಿಸಿದರು.

‘ತಾಲ್ಲೂಕಿನ ಐನೋರಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ₨ 15,600 ನಕಲಿ ಜಾಹಿರಾತು ಬಿಲ್ ಪಡೆದುಕೊಂಡಿದ್ದ ಬಗ್ಗೆ ಪಿಡಿಒ ರಾಮಕೃಷ್ಣ ಅವರು ಬಂಗಾರಪೇಟೆ ಕಾಯರ್ನಿವರ್ಹಣಾಧಿಕಾರಿಗೆ ದೂರು ನೀಡಿದ್ದರು. ಈ ಸಂಬಂಧ ಜಿಲ್ಲಾ ಪಂಚಾಯಿತಿ ಒಂಬುಡ್ಸ್‌ಮಾನ್ ವಿಚಾರಣೆ ನಡೆಸುತ್ತಿದೆ’ ಎಂದು ತಿಳಿಸಿದರು.

ಪಿಡಿಒ ರಾಮಕೃಷ್ಣ ಮೇಲೆ ಹಲ್ಲೆ ನಡೆಸಿರುವ ಸಂಬಂಧ ನಗರದ ಗಲ್‌ಪೇಟೆ ಠಾಣೆಗೆ ದೂರು ನೀಡಲಾಗಿದೆ. ಕೂಡಲೇ ಪೊಲೀಸರು ನಾರಾಯಣಸ್ವಾಮಿಯನ್ನು ಬಂಧಿಸಿ ನ್ಯಾಯಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

ಸಂಘದ ಸದಸ್ಯ ಮಹೇಶ್‌ಕುಮಾರ್ ಮಾತನಾಡಿ, ‘ಜಿಲ್ಲೆಯಲ್ಲಿ ಪಿಡಿಒಗಳ ಮೇಲೆ ಹಲ್ಲೆಗಳು ನಡೆಯುತ್ತಲೇ ಇದ್ದರೂ ಕ್ರಮ ಇಲ್ಲದಿರುವುದು ಬೇಸರದ ಸಂಗತಿಯಾಗಿದೆ. ಎಸ್.ನಾರಾಯಣಸ್ವಾಮಿ ಇಲಾಖೆಯಿಂದ ಅಂಗರಕ್ಷಕನನ್ನು ಪಡೆದಿದ್ದು, ಪಿಡಿಒಗಳು ಮಾತ್ರವಲ್ಲದೆ ನಾನಾ ಇಲಾಖೆಗಳ ಅಧಿಕಾರಿಗಳಿಗೂ ಬೆದರಿಕೆಗಳನ್ನು ಹಾಕಿ ಹಣ ವಸೂಲಿ ಮಾಡುತ್ತಿದ್ದಾನೆ’ ಎಂದು ದೂರಿದರು.

‘ರಕ್ಷಣೆಗಾಗಿ ಸರ್ಕಾರದಿಂದ ಗನ್‌ಮ್ಯಾನ್‌ನ್ನು ಪಡೆದು ಈ ರೀತಿ ತೊಂದರೆಗಳನ್ನು ನೀಡುತ್ತಿರುವ ಆತನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲೇಬೇಕಿದ್ದು, ಒಂದು ವೇಳೆ ಅನ್ಯಾಯವಾದರೆ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಸಂಘದ ಕಾರ್ಯದರ್ಶಿ ಎಂ.ರಾಮಕೃಷ್ಣ, ಖಜಾಂಚಿ ಲಕ್ಷ್ಮಿ, ಸದಸ್ಯರಾದ ವೇಣು, ಎನ್.ನಾಗರಾಜ್, ಎಚ್.ನಾಗೇಶ್, ಸರಸ್ವತಿ, ರಾಮಕೃಷ್ಣ, ಎಸ್.ರಮೇಶ್, ಶ್ರೀನಿವಾಸ, ಬೈರೆಡ್ಡಿ ಹಾಜರಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !