ಬುಧವಾರ, ಫೆಬ್ರವರಿ 19, 2020
25 °C

ಜನಪರ ಹೋರಾಟ ಹತ್ತಿಕ್ಕುವ ಪ್ರಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಗಾಂಧೀಜಿಯ ತತ್ವ ಸಿದ್ಧಾಂತ ಪಾಲಿಸಿಕೊಂಡು ಬಂದಿರುವ ಸಂಸ್ಥೆಯು ಈವರೆಗೆ 166 ಹುಣ್ಣಿಮೆ ಕಾರ್ಯಕ್ರಮ ನಡೆಸಿದೆ’ ಎಂದು ಆದಿಮ ಸಾಂಸ್ಕೃತಿಕ ಕೇಂದ್ರದ ಕಾರ್ಯದರ್ಶಿ ಹ.ಮಾ.ರಾಮಚಂದ್ರ ಹೇಳಿದರು.

ಹುಣ್ಣಿಮೆ ಹಾಡು ಪ್ರಯುಕ್ತ ನಗರದ ಆದಿಮ ಸಾಂಸ್ಕೃತಿಕ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ‘ಊರು ಸುಟ್ಟರೂ ಹನುಮಪ್ಪ ಹೊರಗ’ ನಾಟಕ ಪ್ರದರ್ಶನದಲ್ಲಿ ಮಾತನಾಡಿ, ‘ದೇಶದಲ್ಲಿ ನಿರಂತರ ಚಳವಳಿ ನಡೆಯುತ್ತಿವೆ. ಸರ್ಕಾರದ ಜನವಿರೋಧಿ ನೀತಿಗಳ ಬಗ್ಗೆ ಜನ ಜಾಗೃತರಾಗಬೇಕು’ ಎಂದು ಸಲಹೆ ನೀಡಿದರು.

‘ಕವಿತೆ, ನಾಟಕ, ಲೇಖನ ಬರೆಯುವ ಸ್ವತಂತ್ರ ಕಿತ್ತುಕೊಳ್ಳುವುದು ಯಾವ ನೀತಿ? ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಕೇಂದ್ರ ಸರ್ಕಾರದ ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡುತ್ತಿದೆ. ಜನಪರ ಹೋರಾಟಗಳನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಆದಿಮ ಸಾಂಸ್ಕೃತಿಕ ಕೇಂದ್ರವನ್ನು ಇಷ್ಟು ಚೆನ್ನಾಗಿ ಬೆಳೆಸಿರುವುದಕ್ಕೆ ಸಂತಸವಾಗುತ್ತದೆ. ದುಡಿದು ನಾವು ಮಾತ್ರ ಬದುಕುವುದಕ್ಕಿಂತ ಸಮಾಜಕ್ಕೆ ಒಳಿತು ಮಾಡಬೇಕು’ ಎಂದು ವಿಶ್ವಮಾನವ ರಾಜ್‌ಕುಮಾರ್ ಸೇವಾ ಸಮಿತಿ ಅಧ್ಯಕ್ಷ ರಾಜು ಹೇಳಿದರು.

‘ಆದಿಮ ಕೇಂದ್ರವು ನೆಲೆಗೊಂಡಿರುವ ಬೆಟ್ಟವು ಪ್ರಕೃತಿ ವಿಸ್ಮಯ ತಾಣವೆನಿಸುತ್ತದೆ. ಆದಿಮದಂತಹ ಸಂಸ್ಥೆ ಕಟ್ಟಿ ಬೆಳೆಸುವುದು ಕಷ್ಟದ ಕೆಲಸ. ಇಂತಹ ಸಂಸ್ಥೆಗಳಿಂದಲೇ ನಮ್ಮ ಜಾನಪದ, ನಾಟಕ ಉಳಿದಿದೆ. ಇಲ್ಲಿ ನಡೆಯುವ ಕಾರ್ಯಕ್ರಮಗಳಿಂದ ಹೊಸ ಗ್ರಾಮೀಣ ಪ್ರತಿಭೆಗಳು ಅನಾವರಣಗೊಂಡಿವೆ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಜನ್ನಘಟ್ಟ ವಿ.ವೆಂಕಟಮುನಿಯಪ್ಪ ಅಭಿಪ್ರಾಯಪಟ್ಟರು.

ವಿಶ್ವಪಥ ಕಲಾ ಸಂಗಮದ ಕಲಾವಿದರು ಹನುಮಂತ ಹಾಲಿಗೇರ ರಚನೆಯ ‘ಊರು ಸುಟ್ಟರೂ ಹನುಮಪ್ಪ ಹೊರಗ’ ನಾಟಕ ಪ್ರದರ್ಶಿಸಿದರು. ರಾಜ್ಯ ಜನಪದ ಅಕಾಡೆಮಿ ಮಾಜಿ ಸದಸ್ಯ ಡಿ.ಆರ್‌.ರಾಜಪ್ಪ, ನಾಟಕ ರಚನಕಾರ ಹನುಮಂತ ಹಾಲಿಗೇರ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು