ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಉತ್ತರ ವಿ.ವಿ ಕೌನ್ಸೆಲಿಂಗ್‌

Last Updated 28 ಜನವರಿ 2021, 11:36 IST
ಅಕ್ಷರ ಗಾತ್ರ

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ 2020–21ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ಪದವಿ ಕೋರ್ಸ್‌ಗಳ 2ನೇ ಸುತ್ತಿನ ಪ್ರವೇಶಾತಿ ಕೌನ್ಸೆಲಿಂಗ್‌ ಪ್ರಕ್ರಿಯೆ ಜ.29 ಮತ್ತು ಜ.30ರಂದು ನಡೆಯಲಿದೆ.

ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಸೇರಿದಂತೆ ಎಲ್ಲಾ ವಿಜ್ಞಾನ ವಿಭಾಗದ ಕೋರ್ಸ್‌ಗಳಿಗೆ ಜ.29ರಂದು ಬೆಳಿಗ್ಗೆ 10.30ರಿಂದ ಆರಂಭವಾಗಿ ಕೊನೆಯರ‍್ಯಾಂಕ್‌ವರೆಗೂ ಅದೇ ದಿನ ಕೌನ್ಸೆಲಿಂಗ್‌ ಮುಕ್ತಾಯಗೊಳ್ಳಲಿದೆ ಎಂದು ವಿ.ವಿ ಕುಲಸಚಿವ ವೆಂಕಟೇಶಮೂರ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಲಾ ವಿಭಾಗದ ಕಲೆ, ಸಮಾಜ ವಿಜ್ಞಾನ ವಿಷಯಗಳಾದ ಕನ್ನಡ, ಇಂಗ್ಲೀಷ್, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಎಂಎಸ್‌ಡಬ್ಲ್ಯೂ, ಪತ್ರಿಕೋದ್ಯಮ, ಸಮೂಹ ಸಂವಹನ ವಿಷಯಗಳಿಗೆ ಜ.29ರಂದು ಬೆಳಿಗ್ಗೆ 10.30ರಿಂದ ಕೊನೆಯ ರ‍್ಯಾಂಕ್‌‌ ಮುಗಿಯುವವರೆಗೂ ಕೌನ್ಸೆಲಿಂಗ್‌ ಪ್ರಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ವಾಣಿಜ್ಯ ವಿಭಾಗದ ಎಂ.ಕಾಂ, ಎಂಎಫ್‍ಎ ಸ್ನಾತಕೋತ್ತರ ಪದವಿಗೆ ಜ.30ರಂದು ಬೆಳಿಗ್ಗೆ 10.30ರಿಂದ ಆರಂಭವಾಗಿ ಕೊನೆ ರ‍್ಯಾಂಕ್‌ವರೆಗೂ ಕೌನ್ಸೆಲಿಂಗ್‌ ನಡೆಯಲಿದೆ. ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗೆ ವಿ.ವಿಯ ವೆಬ್‌ಸೈಟ್ ವಿಳಾಸ ಗಮನಿಸಬಹುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT