ಬಂಗಾರಪೇಟೆ: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ಬಿಹಾರ ಮೂಲದ ಸುಮಾರು 42 ಮಕ್ಕಳನ್ನು ಪೊಲೀಸರು ಬುಧವಾರ ರಕ್ಷಿಸಿ, ಕೆಜಿಎಫ್ನ ಸರ್ಕಾರಿ ಬಾಲಮಂದಿರಕ್ಕೆ ದಾಖಲಿಸಿದ್ದಾರೆ.

ಬಿಹಾರ ಮೂಲದ ಮುಜಾಮಿಲ್ ಮತ್ತು ಅಫ್ರೋಜ್ ಎಂಬುವವರು ಈ ಮಕ್ಕಳನ್ನು ರೈಲಿನ ಮೂಲಕ ಕರೆತಂದಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಮುಜಾಫರ್ ಪುರ ಎಕ್ಸ್ಪ್ರೆಸ್ ರೈಲಿನ ಮೂಲಕ ಬೆಳಿಗ್ಗೆ 9 ಗಂಟೆ ಸುಮಾರಿಗೆ ಬಂಗಾರಪೇಟೆ ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಮಕ್ಕಳು, ಅಲ್ಲಿಂದ ನೇರವಾಗಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದರು. ಹಾವೇರಿಗೆ ತೆರಳುವ ಬಸ್ಗಾಗಿ ಕಾಯುತ್ತಿದ್ದ ಮಕ್ಕಳ ಗುಂಪನ್ನು ಕಂಡು ಅನುಮಾನಗೊಂಡ ಸಾರ್ವಜನಿಕರು ತಕ್ಷಣವೇ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಇನ್ಸ್ಪೆಕ್ಟರ್ ರವಿಕುಮಾರ್ ಮತ್ತು ತಂಡ ಸ್ಥಳಕ್ಕೆ ಧಾವಿಸಿ ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ. ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಸದ್ಯ ಕೆಜಿಎಫ್ ಸರ್ಕಾರಿ ಬಾಲ ಮಂದಿರದಲ್ಲಿ ತಾತ್ಕಾಲಿಕ ಆಶ್ರಯ ನೀಡಲಾಗಿದೆ.

ಮಕ್ಕಳನ್ನು ಸದ್ಯ ಸುರಕ್ಷಿತವಾಗಿರಿಸಲಾಗಿದೆ. ಭಾಷೆಯ ಸಮಸ್ಯೆಯಿದ್ದರೂ ಅಧಿಕಾರಿಗಳು ಮಕ್ಕಳಿಂದ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ಪ್ರಕರಣದ ಹಿಂದೆ ಯಾರಿದ್ದಾರೆ ಮತ್ತು ಮಕ್ಕಳನ್ನು ಎಲ್ಲಿಗೆ ಕರೆದೊಯ್ಯಲಾಗುತ್ತಿತ್ತು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಸಿ.ರವಿಕುಮಾರ್ ತಿಳಿಸಿದ್ದಾರೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-18-1146671732

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.