ಬಂಗಾರಪೇಟೆ: ನಗರದ ನಂದಿ ಮೆಡಿಕಲ್ ವೃತ್ತದಲ್ಲಿರುವ ಬಿಜೆಪಿ ಮುಖಂಡರ ಕಚೇರಿಯ ಮೇಲೆ ಪಕ್ಷದ ಧ್ವಜಾರೋಹಣ ಮಾಡುವ ಮೂಲಕ ಸೋಮವಾರ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.

ಈ ವೇಳೆ ಕಾರ್ಯಕರ್ತರಿಂದ ಭಾರತ ಮಾತೆ ಮತ್ತು ಪಕ್ಷದ ಸಂಸ್ಥಾಪಕ ನಾಯಕರ ಪರ ಘೋಷಣೆಗಳು ಮೊಳಗಿದವು. ಮುಖಂಡರು ಹಾಗೂ ಕಾರ್ಯಕರ್ತರು ಸಿಹಿ ಹಂಚಿ ಶುಭಾಶಯ ವಿನಿಮಯ ಮಾಡಿಕೊಂಡರು.

ಬಳಿಕ ಕಪಾಲಿ ಶಂಕರ್ ಮಾತನಾಡಿ, ಬಿಜೆಪಿ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದ್ದು, ಪಕ್ಷದ ಸಿದ್ಧಾಂತ ಮತ್ತು ಸರ್ಕಾರದ ಜನಪರ ಯೋಜನೆಗಳನ್ನು ಪ್ರತಿಯೊಂದು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದರು.

ಸ್ಥಳೀಯ ಬಿಜೆಪಿ ಮುಖಂಡರಾದ ದೇಶಿ ಹಳ್ಳಿ ಶ್ರೀನಿವಾಸ್, ಅಯ್ಯಪ್ಪ, ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-18-265450329

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.