ಬಂಗಾರಪೇಟೆ: ತಾಲೂಕಿನಾದ್ಯಂತ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆಗಳ ಮೇಲ್ದರ್ಜೆಗೇರಿಸುವಿಕೆ ಹಾಗೂ ವಿವಿಧ ಕಾಮಗಾರಿಗಳಿಗೆ ಮರುಜೀವ ಸಿಕ್ಕಿದ್ದು, ಅಭಿವೃದ್ಧಿ ಕಾರ್ಯಗಳು ತೀವ್ರಗತಿಯಲ್ಲಿ ಸಾಗುತ್ತಿವೆ ಎಂದು ಬಂಗಾರಪೇಟೆ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಮುನಿರಾಜು ತಿಳಿಸಿದರು.

ನಗರದ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಗಾರಪೇಟೆಯಿಂದ ತಮಿಳುನಾಡು ಗಡಿಯವರೆಗಿನ ರಸ್ತೆ ಸಂಪರ್ಕವನ್ನು ಸಂಪೂರ್ಣವಾಗಿ ಆಧುನೀಕರಿಸಲಾಗಿದೆ. ಇದರಿಂದ ಅಂತರ ರಾಜ್ಯ ಸರಕು ಸಾಗಣೆ ಹಾಗೂ ಪ್ರಯಾಣಿಕರ ಸುಗಮ ಸಂಚಾರಕ್ಕೆ ಸಹಕಾರಿಯಾಗಲಿದೆ. ತಾಲ್ಲೂಕಿನ ಗ್ರಾಮೀಣ ಮತ್ತು ನಗರ ಪ್ರದೇಶಗಳ ಆಯ್ದ ಒಳ ರಸ್ತೆಗಳನ್ನು ಹಂತಹಂತವಾಗಿ ಸಿಮೆಂಟ್ ರಸ್ತೆಗಳನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದರು.

ಈದ್ಗಾ ಮೈದಾನ ಹಾಗೂ ಎಲ್ಲಾ ಸಮುದಾಯ ಭವನಗಳ ನಿರ್ಮಾಣಕ್ಕಾಗಿ ತಲಾ 8 ರಿಂದ 10 ಗುಂಟೆ ಸರ್ಕಾರಿ ಜಮೀನನ್ನು ಅಧಿಕೃತವಾಗಿ ಕಾಯ್ದಿರಿಸಿ, ಮಂಜೂರಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ತಾಲ್ಲೂಕಿನಲ್ಲಿ ಸುಸಜ್ಜಿತ ಕನ್ನಡ ಭವನ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ‘ಬುದ್ಧ ಉದ್ಯಾನವನ’ವನ್ನು ಆಧುನಿಕ ವಿನ್ಯಾಸದೊಂದಿಗೆ ನವೀಕರಿಸಲಾಗುತ್ತಿದೆ. ಕ್ಷೇತ್ರದಲ್ಲಿ ಕುಡಿವ ನೀರು, ಸುಸಜ್ಜಿತ ರಸ್ತೆ, ಬೀದಿ ದೀಪಗಳಂತಹ ಮೂಲ ಸೌಲಭ್ಯಗಳನ್ನು ಒದಗಿಸುವ ಮೂಲಕ ತಾಲ್ಲೂಕನ್ನು ಮಾದರಿ ತಾಲ್ಲೂಕನ್ನು ರೂಪಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-18-1694467830

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.