ಬಂಗಾರಪೇಟೆ: ನಗರದ ಆರ್.ಆರ್.ಕನ್ವೆನ್ಷನ್ ಹಾಲ್ನಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಜನಾಂಗದ ಕುಂದುಕೊರತೆ ಸಭೆಯು ಶಾಸಕ ಎಸ್.ಎನ್. ನಾರಾಯಣಸ್ವಾಮಿ ನೇತೃತ್ವದಲ್ಲಿ ಮಂಗಳವಾರ ನಡೆಯಿತು.

ಸಭೆಯಲ್ಲಿ ದಲಿತ ಸಮಾಜ ಸೇನೆ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್ ಮಾತನಾಡಿ, ಮೀಸಲು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ದಲಿತ ಅಭಿವೃದ್ಧಿಗಾಗಿ ನೀವು ಕೈಗೊಂಡಿರುವ ಯೋಜನೆಗಳು ಯಾವುವು?. ತಾಲ್ಲೂಕಿನಲ್ಲಿ ಭೂಮಿ ಇಲ್ಲದ ಎಷ್ಟು ಮಂದಿ ದಲಿತ ರೈತರಿಗೆ ಮತ್ತು ಬಡವರಿಗೆ ಬಗರ್ ಹುಕುಂ ಸಾಗುವಳಿ ಚೀಟಿ ನೀಡಲಾಗಿದೆ. ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಎಷ್ಟು ಕುಟುಂಬಗಳಿಗೆ ಹಕ್ಕುಪತ್ರ ನೀಡಿದ್ದೀರಾ? ಅಂಬೇಡ್ಕರ್ ಪ್ರತಿಮೆಗೆ ನಿರ್ಮಿಸಿರುವ ಚಾವಣಿ ಮಳೆ ಬಂದರೆ ಸೋರುತ್ತಿದೆ. ಇಂತಹ ಕಳಪೆ ಕಾಮಗಾರಿಗಳ ವಿರುದ್ಧ ನಿಮ್ಮ ಕ್ರಮವೇನು ಎಂದು ಪ್ರಶ್ನಿಸಿದರು.

ಗುಟ್ಟಹಳ್ಳಿ ಶ್ರೀನಿವಾಸ್ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳಲ್ಲಿ ಶೌಚಾಲಯ ಸ್ವಚ್ಛತೆ ಕಾಪಾಡಬೇಕು. ದಲಿತ ಕಾಲೊನಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ರೈತ ಸಂಘ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ, ದಲಿತರ ಅಂತ್ಯಕ್ರಿಯೆ ಹಾಗೂ ಶಿಕ್ಷಣಕ್ಕೆ ಅನುದಾನ ನೀಡಲು ಪಿಡಿಒಗಳು ಸ್ಪಂದಿಸುತ್ತಿಲ್ಲ. ತಾಲ್ಲೂಕಿನಾದ್ಯಂತ ಭೂಗಳ್ಳರು ಸರ್ಕಾರಿ ಜಮೀನು ಹಾಗೂ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಸೂಕ್ತ ಕ್ರಮ ವಹಿಸಬೇಕೆಂದು ಒತ್ತಾಯಿಸಿದರು.

ಜಿವಿಕಾ ರಾಮಚಂದ್ರಪ್ಪ ಮಾತನಾಡಿ, ಸರ್ಕಾರದಿಂದ ಬಿಡುಗಡೆಯಾಗುವ ಶೇ 26ರಷ್ಟು ಅನುದಾನವನ್ನು ಕಟ್ಟುನಿಟ್ಟಾಗಿ ಪರಿಶಿಷ್ಟರ ಅಭಿವೃದ್ಧಿಗೆ ಬಳಸಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಾತನಾಡಿ, ‘ನನ್ನ ಅಧಿಕಾರಾವಧಿಯಲ್ಲಿ ದಲಿತ ಸಮುದಾಯದ ಏಳಿಗೆಗಾಗಿ ಪ್ರಾಮಾಣಿಕವಾಗಿ ಶ್ರಮಿಸಲಾಗುತ್ತಿದೆ. ಈ ಹಿಂದೆ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ದಲಿತ ಕಾಲೊನಿಗಳಲ್ಲಿ ಈಗ ಸಿಸಿ ರಸ್ತೆ ನಿರ್ಮಾಣ ಮಾಡಲಾಗಿದ್ದು, ಕೆಸರು ಮುಕ್ತ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ಕಾಲೊನಿಯಲ್ಲಿ ಶುದ್ಧ ಕುಡಿವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಮುಖ್ಯ ರಸ್ತೆಗಳಿಂದ ಕಾಲೊನಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಪಡಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳಡಿ ಸಿಗುವ ಸವಲತ್ತುಗಳನ್ನು ನೇರವಾಗಿ ತಲುಪಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲೇ ಮಾದರಿಯಾಗುವಂತಹ ₹3 ಕೋಟಿ ವೆಚ್ಚದ ಸುಸಜ್ಜಿತ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿಗಳು ಸಿದ್ಧರಾಗಲು ವಾಚನಾಲಯ, ವಸತಿ ಗೃಹ ಹಾಗೂ ಸಭಾಂಗಣ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಅಕ್ರಮ-ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಅರ್ಹ ದಲಿತ ರೈತರಿಗೆ ಸಾಗುವಳಿ ಚೀಟಿ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ತಾಲ್ಲೂಕಿನಾದ್ಯಂತ ವಸತಿ ರಹಿತ ಅರ್ಹ ಎಸ್ಸಿ ಮತ್ತು ಎಸ್ಟಿ ಸಮುದಾಯದ ಜನರಿಗೆ 10 ಸಾವಿರ ನಿವೇಶನ ನೀಡುವುದಾಗಿ ಘೋಷಿಸಿದರು. ನಗರದ ಪಾದಚಾರಿ ಮಾರ್ಗದ ಒತ್ತುವರಿಯನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಪುರಸಭೆ ಮುಖ್ಯಾಧಿಕಾರಿ ಹಾಗೂ ಪೊಲೀಸ್ ಇಲಾಖೆಗೆ ಖಡಕ್ ಎಚ್ಚರಿಕೆ ನೀಡಲಾಯಿತು. ಗ್ರಾಮೀಣ ಭಾಗದ ದಲಿತ ಕಾಲೊನಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸಾರ್ವಜನಿಕರು ಕೆಲಸದ ಅವಧಿಯಲ್ಲಿ ಕರೆ ಮಾಡಿದರೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸಬೇಕು. ಇಲಾಖೆ ಸಿಬ್ಬಂದಿ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸಲು ವಿಳಂಬ ಮಾಡಬಾರದು ಎಂದು ಶಾಸಕರು ಎಚ್ಚರಿಕೆ ನೀಡಿದರು.

ತಹಶೀಲ್ದಾರ್ ಕೆ.ಎನ್.ಸುಜಾತ, ಗ್ರೇಡ್ 2 ತಹಶೀಲ್ದಾರ್ ಜಿ.ಎಸ್.ಗಾಯತ್ರಿ, ಇಒ ರವಿಕುಮಾರ್, ಎಇಇ ರವಿಕುಮಾರ್, ಸುಕುಮಾರ್ ಬಸವರಾಜು, ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ, ಸಹಾಯಕ ನಿರ್ದೇಶಕಿ ಪ್ರತಿಭಾ, ಶಿವ ಕುಮಾರಿ, ಇನ್ಸ್ಪೆಕ್ಟರ್ ರವಿ ಕುಮಾರ್, ಅರಣ್ಯ ವಲಯಾಧಿಕಾರಿ ಶ್ರೀಲಕ್ಷ್ಮಿ, ಬಿಇಓ ಶಶಿಕಲ, ಯುವರಾಜ್, ಹುಣಸನಹಳ್ಳಿ ಎನ್.ವೆಂಕಟೇಶ್, ಕಲಾವಿದ ಯಲ್ಲಪ್ಪ ಸೇರಿದಂತೆ ಇತರರು ಇದ್ದರು.