ಬಂಗಾರಪೇಟೆ: ಇಲ್ಲಿನ ವಿಜಯನಗರದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ. ಒಬ್ಬ ಮಹಿಳೆಯನ್ನು ರಕ್ಷಿಸಿದ್ದಾರೆ.

ಮೇರಿ (40), ಗೀತಾ (48 ) ಮಂಜುಳ (34) ಬಂಧಿತ ಆರೋಪಿಗಳು. ಇವರನ್ನು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತ ಮಹಿಳೆಯರು ವಿಜಯನಗರದ 2ನೇ ಕ್ರಾಸ್ನಲ್ಲಿ ಮನೆಯೊಂದನ್ನು ಬಾಡಿಗೆ ಪಡೆದು, ಯಾರಿಗೂ ಅನುಮಾನ ಬಾರದಂತೆ ಹಲವು ದಿನಗಳಿಂದ ಈ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಹಾಗೂ ಡಿವೈಎಸ್ಪಿ ವಿ.ಲಕ್ಷ್ಮಯ್ಯ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಇನ್ಸ್ಪೆಕ್ಟರ್ ಸಿ.ರವಿಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಒಬ್ಬ ಮಹಿಳೆಯನ್ನು ರಕ್ಷಿಸಿ, ಮೂವರನ್ನು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.