ಬಂಗಾರಪೇಟೆ: ಸಂವಿಧಾನವು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಬುನಾದಿಯಾಗಿದೆ ಎಂದು ಕರ್ನಾಟಕ ದಲಿತ ರೈತ ಸೇನೆ ರಾಜ್ಯಾಧ್ಯಕ್ಷ ಹುಣಸನಹಳ್ಳಿ ಎನ್.ವೆಂಕಟೇಶ್ ತಿಳಿಸಿದರು.

ನಗರದ ಕೋಲಾರ ಮುಖ್ಯರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಬುಧವಾರ ಮಾಲಾರ್ಪಣೆ ಸಲ್ಲಿಸಿ ಮಾತನಾಡಿದ ಅವರು, ಸಂವಿಧಾನದ ರಚನಾ ಸಮಿತಿಯ ಅಧ್ಯಕ್ಷ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚನೆಯಲ್ಲಿ ವಹಿಸಿದ ನಿರ್ಣಾಯಕ ಪಾತ್ರ ವಹಿಸಿದ್ದರು. ಅವರ ಕೊಡುಗೆ ಸ್ಮರಿಸಲು ಈ ದಿನ ಒಂದು ಅವಕಾಶವಾಗಿದೆ ಎಂದರು.

ದೇಶದ ಪ್ರಜೆಗಳಲ್ಲಿ ಸಂವಿಧಾನದ ಮೌಲ್ಯಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಬಗ್ಗೆ ಅರಿವು ಮೂಡಿಸುವುದು ಈ ದಿನದ ಉದ್ದೇಶ.

ಸಂವಿಧಾನವು ಎಲ್ಲರೂ ಸಮಾನವಾಗಿ ಬದುಕಲು ಅವಕಾಶ ಕಲ್ಪಿಸಿದೆ. ಈ ಬಗ್ಗೆ ಜನರಿಗೆ ಅವಕಾಶ ಕಲ್ಪಿಸಲು ಈ ದಿನ ಮಹತ್ವಪೂರ್ಣವಾಗಿದೆ ಎಂದು ತಿಳಿಸಿದರು.

ದಲಿತ ಸಂಘರ್ಷ ಸಮಿತಿ ಸಂಚಾಲಕ ಸೂಲಿಕುಂಟೆ ರಮೇಶ್ ಮಾತನಾಡಿ, ಭಾರತದ ಪ್ರಜಾಪ್ರಭುತ್ವದ ಅಡಿಪಾಯವಾದ ಸಂವಿಧಾನವನ್ನು ಗೌರವಿಸುವ ಮತ್ತು ಅದರ ಮೌಲ್ಯಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಒಂದು ಪ್ರಮುಖ ದಿನವಾಗಿದೆ. ಸಂವಿಧಾನವು ಕೇವಲ ಕಾನೂನುಗಳ ಸಂಗ್ರಹವಲ್ಲ, ಇದು ರಾಷ್ಟ್ರದ ಆತ್ಮ ಇದ್ದಂತೆ. ಇದು ವೈವಿಧ್ಯಮಯ ಭಾರತವನ್ನು ಒಂದುಗೂಡಿಸಿ, ಎಲ್ಲರೂ ಘನತೆ ಮತ್ತು ಸ್ವಾತಂತ್ರ್ಯದಿಂದ ಬದುಕಲು ಬೇಕಾದ ಚೌಕಟ್ಟನ್ನು ಒದಗಿಸುತ್ತದೆ ಎಂದರು.

ಈ ವೇಳೆ ಸತೀಶ್, ಲೋಕೇಶ್, ಮಧು, ಅರವಿಂದ್ ಮಾರಾ, ಲಕ್ಷ್ಮಮ್ಮ, ಶಾಂತಮ್ಮ, ಲಲಿತಮ್ಮ, ಶ್ರೀನಿವಾಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.