ಬಂಗಾರಪೇಟೆ: ಕಾಳಸಂತೆಯಲ್ಲಿ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಮಾರಾಟ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಪುಟ್ಟಣ್ಣಯ್ಯ ಬಣದ ಸದಸ್ಯರು ಸಹಾಯಕ ಕೃಷಿ ಅಧಿಕಾರಿ ಮುನಿರಾಜು ಅವರಿಗೆ ಮನವಿ ಸಲ್ಲಿಸಿದರು.
ಗೌರವಾಧ್ಯಕ್ಷ ಅಬ್ಬಣ್ಣ ಮಾತನಾಡಿ, ಈಗಾಗಲೇ ಮುಂಗಾರು ಮಳೆ ಆರಂಭವಾಗಿದೆ. ಸರ್ಕಾರ ರೈತರಿಗೆ ಬಿತ್ತನೆ ಬೀಜ ಹಾಗೂ ರಸ ಗೊಬ್ಬರವನ್ನು ಆಯಾ ಕೇಂದ್ರಗಳಿಗೆ ಸರಬರಾಜು ಮಾಡುತ್ತಿದೆ. ಆದರೆ ಕೆಲ ಅಧಿಕಾರಿಗಳು ಮಧ್ಯವರ್ತಿಗಳ ಮೂಲಕ ಬಿತ್ತನೆ ಬೀಜ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ದೂರಿದರು.
ಇಲಾಖೆಯಿಂದ ತಾಲ್ಲೂಕಿನ ಎಷ್ಟು ರೈತರಿಗೆ ಬಿತ್ತನೆಬೀಜ ನೀಡಲಾಗುತ್ತಿದೆ ಎನ್ನುವ ಬಗ್ಗೆ ಸಂಘಟನೆ ಗಮನಕ್ಕೆ ಬಂದಿದೆ. ಈ ಬಗ್ಗೆ ಅಗತ್ಯ ದಾಖಲೆಯೊಂದಿಗೆ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಅಧಿಕಾರಿ ಮುನಿರಾಜು, ರೈತರು ಮೊಬೈಲ್ ಕ್ಯೂಆರ್ ಕೋಡ್ ಬಳಸಿ ಬಿತ್ತನೆ ಬೀಜ ತೆಗೆದುಕೊಳ್ಳುತ್ತಿದ್ದಾರೆ. ಬೀಜ ಮಾರಾಟದಲ್ಲಿ ಯಾವುದೇ ರೀತಿಯ ಅಕ್ರಮ ನಡೆಯುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು. ಅಲ್ಲದೆ ಸಂಘಟನೆ ಕೇಳಿರುವ ಮಾಹಿತಿ ನೀಡುವುದಾಗಿ ತಿಳಿಸಿದರು.
ಮಹಿಳಾ ಜಿಲ್ಲಾ ಸಂಚಾಲಕಿ ಮಾಗೊಂದಿ ರತ್ನಮ್ಮ, ಜಿಲ್ಲಾ ಸಂಚಾಲಕ ವಡ್ಡಹಳ್ಳಿ ಮಂಜುನಾಥ್, ತಾಲ್ಲೂಕು ಅಧ್ಯಕ್ಷ ನಿತಿನ್, ಉಪಾಧ್ಯಕ್ಷ ಆನಂದ್, ಮಹೇಂದ್ರ, ಶ್ರೀನಿವಾಸ್, ಮುರಳಿ, ಜಯಕೀರ್ತಿ ವೆಂಕಟಲಕ್ಷ್ಮಮ್ಮ, ಸುಶೀಲಮ್ಮ, ಮುನಿರತ್ನಮ್ಮ, ಭಾಗ್ಯಮ್ಮ, ಸುಜಾತ, ಭಾರತಿ, ವರಲಕ್ಷ್ಮಮ್ಮ, ಮಂಗಳ, ಆದಿವೇಣಿ, ಗಂಗಾ, ಶಾಂತಮ್ಮ, ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.