ಬಂಗಾರಪೇಟೆ: ದೇಶದಲ್ಲಿನ ಸಾಮಾಜಿಕ ಅಸಮಾನತೆ ಮತ್ತು ತಾರತಮ್ಯ ನಿರ್ಮೂಲನೆಗೆ ಅಂಬೇಡ್ಕರ್ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅವರ ಪ್ರಯತ್ನಗಳು ಕೇವಲ ಸಾಂವಿಧಾನಿಕ ಚೌಕಟ್ಟಿಗೆ ಸೀಮಿತವಾಗಿರದೆ, ಶಿಕ್ಷಣ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲೂ ವ್ಯಾಪಿಸಿದ್ದವು ಎಂದು ಕರ್ನಾಟಕ ದಲಿತ ರೈತ ಸೇನೆ ರಾಜ್ಯಾಧ್ಯಕ್ಷ ಹುಣಸನಹಳ್ಳಿ ಎನ್. ವೆಂಕಟೇಶ್ ತಿಳಿಸಿದರು.

ನಗರದ ಕೋಲಾರ ಮುಖ್ಯ ರಸ್ತೆಯಲ್ಲಿರುವ ಡಾ ಅಂಬೇಡ್ಕರ್ ಪ್ರತಿಮೆಗೆ ಶನಿವಾರ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾತನಾಡಿದರು. ಅಂಬೇಡ್ಕರ್ ಭಾರತದ ಸಂವಿಧಾನಶಿಲ್ಪಿ ಮಾತ್ರವಲ್ಲದೆ, ನ್ಯಾಯ ಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ಸಮಾಜ ಸುಧಾರಕರಾಗಿ ಆಸ್ಪೃಶ್ಯತೆ, ಅಸಮಾನತೆ ವಿರುದ್ಧ ದಿಟ್ಟತನದಿಂದ ಹೋರಾಡಿದರು. ಈ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದರು ಎಂದರು.

ಸಾಹೇಬ್ ಅಂಬೇಡ್ಕರ್ ಅವರನ್ನು ಒಂದು ವರ್ಗ ಅಥವಾ ಸಮುದಾಯಕ್ಕೆ ಸೀಮಿತ ಮಾಡಬಾರದು. ಬಾಬಾ ಸಾಹೇಬ್ ನಿಧನರಾದ ದಿನ ವಿಶ್ವದ 126 ರಾಷ್ಟ್ರಗಳು ತಮ್ಮ ರಾಷ್ಟ್ರಧ್ವಜ ಕೆಳಗಿಳಿಸಿ ಗೌರವ ಸಲ್ಲಿಸಿದ್ದವು ಎಂದು ಸ್ಮರಿಸಿದರು.

ಈ ಈ ವೇಳೆ ಕಲಾವಿದ ಯಲ್ಲಪ್ಪ, ಅಂಬೇಡ್ಕರ್ ಕ್ಷೇಮಾಭಿವೃದ್ದಿ ಸಂಘದ ಗೌತಮ್, ಲೋಕನಾಥ್, ಅರವಿಂದ ಮಾರಾ, ನಯಜ್, ಶಾಂತಮ್ಮ ಪ್ರಭಾವತಿ, ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.