ಬಂಗಾರಪೇಟೆ: ಗ್ರಾಮೀಣ ಪ್ರದೇಶದ ಜನತೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾದ ಶುದ್ಧ ನೀರಿನ ಘಟಕಗಳು ಸರಿಯಾದ ನಿರ್ವಹಣೆ ಇಲ್ಲದೆ ಸ್ಥಗಿತಗೊಂಡಿದ್ದು, ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.

ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳಲ್ಲಿ ಶುದ್ಧ ಕುಡಿಯುವ ನೀರು ಕಲ್ಪಿಸುವ ಉದ್ದೇಶದಿಂದ 131 ಘಟಕಗಳನ್ನು ಸ್ಥಾಪಿಸಿದ್ದು, 50ಕ್ಕೂ ಹೆಚ್ಚು ಘಟಕಗಳು ಸ್ಥಗಿತಗೊಂಡಿವೆ. ಕೋಟ್ಯಂತರ ವೆಚ್ಚದಲ್ಲಿ ನಿರ್ಮಾಣವಾಗಿರುವ ನೀರಿನ ಘಟಕಗಳು ಬಳಕೆ ಬಾರದಂತಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಫ್ಲೋರೈಡ್, ಆರ್ಸೆನಿಕ್, ನೈಟ್ರೇಟ್ ಮತ್ತು ಹೆಚ್ಚಿದ ಕರಗಿದ ಘನ ಅಂಶಗಳಿರುವ ರಾಸಾಯನಿಕಗಳ ಅಪಾಯ ತಗ್ಗಿಸಲು ಜನರಿಗೆ ಕೈಗೆಟುಕುವ ದರದಲ್ಲಿ ಸುರಕ್ಷಿತ ನೀರು ಒದಗಿಸುವ ಉದ್ದೇಶದಿಂದ ನೀರಿನ ಘಟಕಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಸರಿಯಾದ ನಿರ್ವಹಣೆ ಇಲ್ಲದೆ ಸ್ಥಗಿತಗೊಂಡಿದ್ದು, ಗ್ರಾಮಸ್ಥರು ಅಕ್ಕಪಕ್ಕದ ಗ್ರಾಮಗಳಿಗೆ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ.

ಗುತ್ತಿಗೆ ಪಡೆದ ಏಜೆನ್ಸಿಗಳು, ಗ್ರಾಮ ಪಂಚಾಯಿತಿ ಮತ್ತು ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯದಿಂದಾಗಿ ಯಂತ್ರೋಪಕರಣಗಳು ತುಕ್ಕು ಹಿಡಿಯುದಿದ್ದು, ದುರಸ್ತಿಗೆ ಬಾರದಂತಾಗಿವೆ. ಜೊತೆಗೆ ಜನತೆಗೆ ಶುದ್ಧ ನೀರು ಸಿಗುತ್ತಿಲ್ಲ. ಅನೇಕ ಶುದ್ಧ ನೀರಿನ ಘಟಕಗಳಿವೆ. ಆದರೆ ಅಲ್ಲಿ ನೀರು ಬರುವುದಿಲ್ಲ. ಇದು ಅನೇಕ ಗ್ರಾಮಗಳ ಪರಿಸ್ಥಿತಿಯಾಗಿದೆ. ಹಾಗಾಗಿ ಬಹುಬೇಗ ಸಂಬಂಧಪಟ್ಟ ಅಧಿಕಾರಿಗಳು ನೀರಿನ ಘಟಕಗಳನ್ನು ದುರಸ್ತಿಗೊಳಿಸಲಿ ಎಂಬುದು ನಾಗರಿಕರ ಒತ್ತಾಸೆಯಾಗಿದೆ.

ಗ್ರಾಮೀಣ ಭಾಗದಲ್ಲಿ ಹಾಳಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ರಾಜಶೇಖರ್ ಎಇ ಬಂಗಾರಪೇಟೆ

ಗ್ರಾಮೀಣ ಭಾಗದಲ್ಲಿ ಹಾಳಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರಾಜಶೇಖರ್ ಎಇ ಬಂಗಾರಪೇಟೆ

ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಕೊರತೆಯಿಂದಾಗಿ ಸರ್ಕಾರದ ಲಕ್ಷಾಂತರ ರೂಪಾಯಿ ಅನುದಾನ ವ್ಯರ್ಥವಾಗುತ್ತಿದೆ.
ಕೋದಂಡ ಬೋಪ್ಪನಹಳ್ಳಿ ನಿವಾಸಿ

ಘಟಕ ಸ್ಥಾಪಿಸುವಲ್ಲಿ ಉತ್ಸಾಹ ನಿರ್ವಹಣೆಯಲ್ಲಿ ಇಲ್ಲ

ನೀರಿನ ಘಟಕ ಸ್ಥಾಪಿಸುವಲ್ಲಿ ತೋರುವ ಉತ್ಸಾಹವನ್ನು ನಿರ್ವಹಣೆಯಲ್ಲಿ ತೋರದಿರುವುದು ದೊಡ್ಡ ಸಮಸ್ಯೆಯಾಗಿದೆ. ನೀರಿನ ಘಟಕ ಸ್ಥಗಿತಗೊಂಡಿರುವುದರಿಂದ ಜನರು ಶುದ್ಧ ಕುಡಿಯುವ ನೀರು ಸಿಗದೆ ಪರದಾಡುವಂತಾಗಿದೆ. ಸೂಲಿಕುಂಟೆ ಆನಂದ್ ರಾಜ್ಯಾಧ್ಯಕ್ಷ ದಲಿತ ಸಮಾಜ ಸೇನೆ ==== ಶೀಘ್ರ ದುರಸ್ತಿಗೊಳಿಸಿ ಹಾಳಾದ ಘಟಕ ಅಥವಾ ಯಂತ್ರಗಳ ದುರಸ್ತಿ ವಿಳಂಬವಾಗುತ್ತದೆ. ಕೆಲವೊಮ್ಮೆ ವರ್ಷಗಟ್ಟಲೆ ದುರಸ್ತಿಯಾಗದೆ ಉಳಿದಿದೆ. ಗ್ರಾಮೀಣ ಜನರ ಆರೋಗ್ಯದ ಹಿತದೃಷ್ಟಿಯಿಂದ ಶೀಘ್ರ ದುರಸ್ತಿಗೊಳಿಸಿ. ಹನುಮಂತಯ್ಯ ಎಚ್.ಎಂ. ನಿರ್ದೇಶಕರು ಜಿಲ್ಲಾ ಸಹಕಾರಿ ಒಕ್ಕೂಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.