ಬಂಗಾರಪೇಟೆ: ನಿಸ್ವಾರ್ಥ ಸೇವೆ, ದಾಸೋಹಕ್ಕೆ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಉತ್ತಮ ನಿದರ್ಶನ ಹಾಗೂ ಅವರ ಜೀವನದ ತತ್ವ, ಚಿಂತನೆಗಳು ಎಲ್ಲರಿಗೂ ಆದರ್ಶನೀಯ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.

ನಗರದ ತಾಲ್ಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ರಡ್ಡಿ ಸಮುದಾಯದಿಂದ ಭಾನುವಾರ ಆಯೋಜಿಸಿದ್ದ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಹೇಮರಡ್ಡಿ ಮಲ್ಲಮ್ಮ ಸಾಮಾನ್ಯ ವರ್ಗದ ಕುಟುಂಬದಲ್ಲಿ ಜನಿಸಿದರು. ಬಾಲ್ಯದಿಂದಲೂ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯನ್ನು ಆರಾಧಿಸುತ್ತಿದ್ದರು. ಮಲ್ಲಿಕಾರ್ಜುನನ ಅನುಗ್ರಹದಿಂದ ಆದರ್ಶ ಶರಣೆಯಾಗಿ ರೂಪುಗೊಂಡರು. ಜೀವನದ ಕಡೆಯಲ್ಲಿ ದೇವರನ್ನೇ ಸಾಕ್ಷಾತ್ಕರಿಸಿಕೊಂಡರು. ಅವರು ಆಧ್ಯಾತ್ಮಿಕ ಕ್ಷೇತ್ರದ ಧ್ರುವತಾರೆ ಎಂದು ಹೇಳಿದರು.

ಹೇಮರಡ್ಡಿ ಮಲ್ಲಮ್ಮ ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದರು. ಕರುಣಾಮಯಿ ಹಾಗೂ ದಾಸೋಹಿಯಾಗಿದ್ದರು. ಪರಸ್ಪರ ನಂಬಿಕೆ, ವಿಶ್ವಾಸ, ಕ್ಷಮಿಸುವ ಗುಣ ಸಕಲ ಜೀವರಾಶಿಗಳಿಗೂ ಒಳಿತು ಬಯಸಬೇಕು ಎನ್ನುವ ಮನೋಭಾವನೆಯಿಂದ ಜೀವನ ಸಾಗಿಸಿದರು. ಅನೇಕ ವರ್ಷ ಕಳೆದರೂ ಮಲ್ಲಮ್ಮ ಜನರ ಮನದಲ್ಲಿ ಚಿರಸ್ಥಾಯಿಯಾಗಿದ್ದಾರೆ. ರೆಡ್ಡಿ ಕುಲದವರು ಮಲ್ಲಮ್ಮನನ್ನು ಇಂದಿಗೂ ಮಹಾತಾಯಿಯಂತೆ ಪೂಜಿಸುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ರೆಡ್ಡಿ ಸಂಘದ ಅಧ್ಯಕ್ಷ ತಿಪ್ಪಾರೆಡ್ಡಿ, ರಾಮಚಂದ್ರರೆಡ್ಡಿ, ಬಾಬುರೆಡ್ಡಿ, ಮಂಜುನಾಥರೆಡ್ಡಿ, ಮಲ್ಲಿಕಾರ್ಜುನರೆಡ್ಡಿ, ರವೀಂದ್ರರೆಡ್ಡಿ, ಬಾಲರೆಡ್ಡಿ, ಅಮರನಾರಾಯಣರೆಡ್ಡಿನಾರಾಯಣರೆಡ್ಡಿ, ಶಿರಸ್ತೇದಾರ್ ಪ್ರಭಾಕರನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-18-674139166

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.