ಬಂಗಾರಪೇಟೆ: ನಗರದ ನ್ಯಾಯಾಲಯದ ಸಂಕೀರ್ಣದ ಹತ್ತಿರದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನೌಕರರ ವಸತಿ ಗೃಹಗಳು ನಿರ್ವಹಣೆಯಿಲ್ಲದೆ ಅಕ್ಷರಶಃ ಪಾಳುಬಿದ್ದಿದ್ದು, ವಿಷಜಂತುಗಳ ಅವಾಸ ಸ್ಥಾನವಾಗಿ ಮಾರ್ಪಟ್ಟಿದೆ.

40 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ವಸತಿ ಗೃಹಗಳು ಒಂದು ಕಾಲದಲ್ಲಿ ನೌಕರರಿಂದ ತುಂಬಿರುತ್ತಿತ್ತು. ಆದರೆ, 8 ವರ್ಷಗಳ ಹಿಂದೆ ನಗರದ ಬೆಸ್ಕಾಂ ಕಚೇರಿ ಆವರಣದಲ್ಲಿ ವಸತಿ ಗೃಹ ನಿರ್ಮಾಣ ಹಾಗೂ ಕೆಪಿಟಿಸಿಎಲ್ ಕಾಯಂ ನೌಕರರ ಕೊರತೆ ಹಿನ್ನೆಲೆ ಈ ವಸತಿ ನಿಲಯಗಳಲ್ಲಿ ಯಾರೂ ವಾಸವಿಲ್ಲದೆ ಗಿಡಗಂಟಿಗಳಿಂದ ಆವೃತವಾಗಿ, ಪುಂಡ-ಪೋಕರಿಗಳ ಅಡ್ಡೆಯಾಗಿದೆ.

ವಸತಿ ಗೃಹಗಳ ಸುತ್ತಮುತ್ತ ಸ್ವಚ್ಛತೆ ಮರೀಚಿಕೆಯಾಗಿದ್ದು, ಹತ್ತಾರು ಅಡಿ ಎತ್ತರಕ್ಕೆ ಗಿಡಗಂಟಿಗಳು ಬೆಳೆದಿವೆ. ಇಡೀ ಆವರಣ ಕಾಡಿನಂತಾಗಿದ್ದು, ವಿಷಜಂತುಗಳ ಆವಾಸಸ್ಥಾನವಾಗಿದೆ. ಹಾಗಾಗಿ ಈ ರಸ್ತೆಯಲ್ಲಿ ಜನರು ಸಂಚರಿಸಲು ಭಯಪಡುವಂತಾಗಿದೆ. ನಿರ್ವಹಣೆ ಇಲ್ಲದೆ ಪಾಳುಬಿದ್ದ ಕಟ್ಟಡಗಳು ಅನೈತಿಕ ಚಟುವಟಿಕೆಗಳ ತಾಣವಾಗಿದೆ. ರಾತ್ರಿ ವೇಳೆಯಂತೂ ಮದ್ಯಪಾನ, ಜೂಜಾಟ ಮತ್ತು ಇತರೆ ಅಕ್ರಮ ಕೃತ್ಯಗಳು ಅವ್ಯಾಹತವಾಗಿ ನಡೆಯುತ್ತಿವೆ. ಕಟ್ಟಡದ ಮೂಲೆ ಮೂಲೆಗಳಲ್ಲಿ ಬಿದ್ದಿರುವ ಮದ್ಯದ ಬಾಟಲಿಗಳು ಇಲ್ಲಿನ ದುಸ್ಥಿತಿಗೆ ಸಾಕ್ಷಿ ನುಡಿಯುತ್ತಿವೆ.

ಇಲಾಖೆಯ ಈ ವಸತಿ ಗೃಹಗಳು ಬಳಕೆಗೆ ಯೋಗ್ಯವಾಗಿಲ್ಲದಿದ್ದರೆ ಅವುಗಳನ್ನು ನೆಲಸಮ ಮಾಡಬೇಕು ಅಥವಾ ಸರಿಯಾದ ಬೇಲಿ ನಿರ್ಮಿಸಿ ಸ್ವಚ್ಛಗೊಳಿಸಬೇಕು. ಆದರೆ, ಬೆಸ್ಕಾಂ ಅಧಿಕಾರಿಗಳು ಈ ಬಗ್ಗೆ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ ಈ ಪ್ರದೇಶವನ್ನು ಸ್ವಚ್ಛಗೊಳಿಸಿ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ. ಬೆಸ್ಕಾಂ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಸರ್ಕಾರಿ ಆಸ್ತಿಯನ್ನು ದುರ್ಬಳಕೆಯಾಗದಂತೆ ನೋಡಿಕೊಳ್ಳುತ್ತಾರೆಯೇ ಕಾದು ನೋಡಬೇಕಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-18-1146977625

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.