ಬಂಗಾರಪೇಟೆ: ತಾಲ್ಲೂಕಿನಾದ್ಯಂತ ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ ಖಾತ್ರಿಪಡಿಸುವ ನಿಟ್ಟಿನಲ್ಲಿ ಬಂಗಾರಪೇಟೆ ಪೊಲೀಸರು ವಿಶೇಷ ಆಸರೆ ಯೋಜನೆಯಡಿ ಮನೆ ಮನೆಗೆ ಭೇಟಿ ನೀಡಿ ಕುಂದುಕೊರತೆ ವಿಚಾರಿಸಿದರು.

ಇತ್ತೀಚಿನ ದಿನಗಳಲ್ಲಿ ಒಂಟಿಯಾಗಿ ವಾಸಿಸುವ ಹಿರಿಯರು ಮತ್ತು ಮಹಿಳೆಯರ ಮೇಲೆ ನಡೆಯಬಹುದಾದ ಅಪರಾಧ ತಡೆಯುವ ಉದ್ದೇಶದಿಂದ ಪೊಲೀಸ್ ಇಲಾಖೆ ಈ ಅಭಿಯಾನ ಹಮ್ಮಿಕೊಂಡಿದೆ. ಈ ಯೋಜನೆಯಡಿ ಠಾಣೆ ವ್ಯಾಪ್ತಿಯ ವಿವಿಧ ಗ್ರಾಮಗಳು ಹಾಗೂ ಪಟ್ಟಣ ಪ್ರದೇಶಗಳಲ್ಲಿ ಒಂಟಿಯಾಗಿ ವಾಸಿಸುವವರ ಪಟ್ಟಿ ಸಿದ್ಧಪಡಿಸಿಕೊಂಡಿರುವ ಪೊಲೀಸರು, ಅವರ ಮನೆ ಬಾಗಿಲಿಗೆ ತೆರಳಿ ಆತ್ಮವಿಶ್ವಾಸ ತುಂಬುವ ಕೆಲಸ ನಡೆಸಿದರು.

ಸಂದರ್ಶನದ ವೇಳೆ ಪೊಲೀಸರು ಹಿರಿಯ ನಾಗರಿಕರೊಂದಿಗೆ ಸಮಾಲೋಚನೆ ನಡೆಸಿ, ಅವರ ದೈನಂದಿನ ಭದ್ರತೆ, ತುರ್ತು ಸಂದರ್ಭದಲ್ಲಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಮತ್ತು ಅವರ ಮನೆ ಸುತ್ತಮುತ್ತಲಿನ ಪರಿಸರದ ಕುರಿತು ಮಾಹಿತಿ ಪಡೆದರು.

ಅಪರಿಚಿತರು ಸುಳಿದಾಡಿದರೆ ಅಥವಾ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣ ಠಾಣೆಗೆ ಮಾಹಿತಿ ನೀಡುವಂತೆ ಸೂಚಿಸಿದರು. ಯಾವುದೇ ಆಪತ್ತು ಎದುರಾದಾಗ ತಕ್ಷಣವೇ 112 ಸಂಖ್ಯೆಗೆ ಕರೆ ಮಾಡುವಂತೆ ತಿಳಿಸಲಾಯಿತು. ಮನೆಯೊಳಗೆ ಅಪರಿಚಿತರನ್ನು ಸೇರಿಸಿಕೊಳ್ಳುವ ಮುನ್ನ ಎಚ್ಚರಿಕೆ ವಹಿಸುವಂತೆ ಮತ್ತು ಸಿಸಿಟಿವಿ ಕ್ಯಾಮೆರಾ ಅಳವಡಿಕೆಯ ಮಹತ್ವ ಕುರಿತು ಅರಿವು ಮೂಡಿಸಲಾಯಿತು. ಪ್ರತಿ ವಲಯದ ಬೀಟ್ ಪೊಲೀಸರ ಮೊಬೈಲ್ ಸಂಖ್ಯೆ ನೀಡಿ, ಯಾವುದೇ ಭಯವಿಲ್ಲದೆ ನೆರವು ಪಡೆಯುವಂತೆ ಭರವಸೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-18-1980731723

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.