ಬಂಗಾರಪೇಟೆ: ನಗರದ ಪೊಲೀಸ್ ವಸತಿ ಗೃಹಗಳ ಬಳಿ ದಿನೇ ದಿನೇ ಕಸದ ರಾಶಿ ಹೆಚ್ಚಾಗುತ್ತಿದ್ದು, ಇಡೀ ಪ್ರದೇಶ ದುರ್ವಾಸನೆ ಹಾಗೂ ಸೊಳ್ಳೆಗಳ ಕಾಟದಿಂದ ನಿವಾಸಿಗಳು ತೊಂದರೆ ಅನುಭವಿಸುವಂತಾಗಿತ್ತು.

ದಿನವಿಡೀ ಕೊಳೆತು ನಾರುತ್ತಿದ್ದ ವಾಸನೆಯಿಂದ ಬಾಗಿಲು, ಕಿಟಕಿ ಮುಚ್ಚಿಕೊಂಡು ಕಾಲ ಕಳೆಯುವಂತಾಗಿದೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಮೇ 21 ರಂದು ಪ್ರಜಾವಾಣಿ ಪತ್ರಿಕೆಯಲ್ಲಿ ‘ಕಸ ತೆರವಿಗೆ ಮನವಿ’ ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟವಾಗಿತ್ತು. ಈ ವರದಿಗೆ ಎಚ್ಚೆತ್ತ ನಗರಸಭೆ ಅಧಿಕಾರಿಗಳು ಬೆಳಗ್ಗೆಯೇ ಪೌರಕಾರ್ಮಿಕರ ತಂಡ, ಬೃಹತ್ ನಿರ್ಮಾಣ ಯಂತ್ರ ಮತ್ತು ಕಸದ ವಾಹನದೊಂದಿಗೆ ಸ್ಥಳಕ್ಕೆ ದಾವಿಸಿ ಕಸದ ರಾಶಿಯನ್ನು ತೆರವುಗೊಳಿಸಿ, ಇಡೀ ಪ್ರದೇಶವನ್ನು ಸ್ವಚ್ಛಗೊಳಿಸಿದ್ದಾರೆ. ಜೊತೆಗೆ ಫಾಗಿಂಗ್ ಮಾಡಿ, ಬೀಚಿಂಗ್ ಪೌಡರ್ ಸಿಂಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-18-691387079

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.