ಬಂಗಾರಪೇಟೆ: ತಾಲ್ಲೂಕಿನ ಕಾಮಸಮುದ್ರ ರೈಲ್ವೆ ನಿಲ್ದಾಣದಲ್ಲಿ ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಪರವನಹಳ್ಳಿ ಗ್ರಾಮದ ಧನುಷ್ ರೆಡ್ಡಿ (25) ಮೃತರು. ಈತ ಬೆಂಗಳೂರಿನಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದು, ಮೂರು ತಿಂಗಳ ನಂತರ ಗ್ರಾಮಕ್ಕೆ ಬಂದಿದ್ದ ಎನ್ನಲಾಗಿದೆ.

ಧನುಷ್ ರೆಡ್ಡಿ ಶನಿವಾರ ಮಧ್ಯಾಹ್ನ 12.30ಕ್ಕೆ ಎಲೆಕ್ಟ್ರಿಕ್ ಕಾರಿನಲ್ಲಿ ಬಂದು, ಕಾಮಸಮುದ್ರದ ಬಾರ್ವೊಂದರಲ್ಲಿ ಮದ್ಯಸೇವನೆ ಮಾಡಿದ್ದ ಎನ್ನಲಾಗಿದೆ. ಬಳಿಕ ಮುಖ್ಯ ರಸ್ತೆಯಲ್ಲಿ ಕಾರು ನಿಲ್ಲಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ. ಆ ವೇಳೆ ಸ್ಥಳಕ್ಕೆ ಹೈವೇ ಪೆಟ್ರೋಲಿಂಗ್ ವಾಹನ ಬಂದಿದೆ. ಇದನ್ನು ಕಂಡು ಅಲ್ಲಿಂದ ಆತ ಪರಾರಿಯಾಗಿದ್ದ. ನಂತರ, ಮತ್ತೆ ಬಾರ್ಗೆ ಹೋಗಿ ಮದ್ಯಸೇವಿಸಿದ್ದಾನೆ. ಬಳಿಕ ಅಲ್ಲಿಂದ ಬೇರೊಬ್ಬರ ಬೈಕ್ ತಗೆದುಕೊಂಡು ರೈಲ್ವೆ ನಿಲ್ದಾಣದ ಕಡೆಗೆ ತೆರಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾರ್ನಿಂದ ಬೈಕ್ ತೆಗೆದುಕೊಂಡು ಹೋಗುತ್ತಿರುವ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಕಾಮಸಮುದ್ರ ರೈಲ್ವೆ ನಿಲ್ದಾಣದ ಒಂದನೇ ಪ್ಲಾಟ್ಫಾರಂನಿಂದ ಮತ್ತೊಂದು ಪ್ಲಾಟ್ಫಾರಂಗೆ ಹಳಿ ದಾಟುತ್ತಿದ್ದಾಗ, ಬೆಂಗಳೂರಿನಿಂದ ಕೊಯಂಬತ್ತೂರು ಕಡೆಗೆ ತೆರಳುತ್ತಿದ್ದ ಡಬಲ್ ಡೆಕ್ಕರ್ ರೈಲು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕ ಬಂದಿದ್ದ ಎಲೆಕ್ಟ್ರಿಕ್ ಕಾರನ್ನು ಸದ್ಯ ಕಾಮಸಮುದ್ರ ಪೊಲೀಸ್ ಠಾಣೆ ಆವರಣದಲ್ಲಿ ನಿಲ್ಲಿಸಲಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಗಾರಪೇಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-18-1207238490

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.