ಕೆಜಿಎಫ್: ಬೇಡಿಕೆ ಈಡೇರಿಕೆಗಾಗಿ ಮುಷ್ಕರ ನಡೆಸುತ್ತಿರುವ ಬೆಮಲ್ ಗುತ್ತಿಗೆ ಕಾರ್ಮಿಕರು ಬಂಗಾರಪೇಟೆ ಮತ್ತು ಕೆಜಿಎಫ್ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ತಮ್ಮಿಷ್ಟದಂತೆ ಮುಷ್ಕರ ನಡೆಸುತ್ತಿದ್ದಾರೆ ಎಂದು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಶನಿವಾರ ನಡೆದ ಸಭೆಯ ನಂತರ ಮಾತನಾಡಿ, ಬೆಮಲ್ ಕಾರ್ಮಿಕರು ಎರಡೂ ಕ್ಷೇತ್ರಗಳಲ್ಲಿ ಇರುವುದರಿಂದ ಎರಡೂ ಕ್ಷೇತ್ರಗಳ ಶಾಸಕರು, ಸಂಘ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಇದರಿಂದ ಅವರ ಮುಷ್ಕರಕ್ಕೆ ಶಕ್ತಿ ದೊರಕುತ್ತಿತ್ತು. ಈಗ ಮುಷ್ಕರವನ್ನು ತೀವ್ರಗೊಳಿಸುವ ಸಲುವಾಗಿ ಬಂದ್ ಆಚರಣೆಗೆ ಕರೆ ಕೊಡಲಾಗಿದೆ. ಸ್ಥಳೀಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ಬಂದ್ ಯಶಸ್ವಿಯಾಗುವುದು ಅನುಮಾನ ಎಂದರು.

ನಾವೆಲ್ಲರೂ ಕಾರ್ಮಿಕರ ಪರವಾಗಿದ್ದೇವೆ, ಎಲ್ಲಾ ಹಂತದಲ್ಲಿಯೂ ಕಾರ್ಮಿಕರಿಗೆ ಬೆಂಬಲ ನೀಡಿದ್ದೇವೆ. ಬೆಮಲ್ ಕಾರ್ಖಾನೆ ರಾಜ್ಯ ಸರ್ಕಾರದ ಹಿಡಿತದಲ್ಲಿಲ್ಲ. ಕೇಂದ್ರ ಸರ್ಕಾರಿ ಸ್ವಾಮ್ಯದ ಉದ್ದಿಮೆಯಾಗಿದೆ. ನಾವು ಮಾನಸಿಕವಾಗಿ ಮತ್ತು ನೈತಿಕವಾಗಿ ಅವರಿಗೆ ಬೆಂಬಲ ಕೊಡಬಹುದಷ್ಟೇ ಎಂದು ಹೇಳಿದರು.

ಶಾಸಕಿ ಎಂ.ರೂಪಕಲಾ ಮಾತನಾಡಿ, ಬೆಮಲ್ ರಕ್ಷಣಾ ಖಾತೆಗೆ ಸೇರುತ್ತದೆ. ರಕ್ಷಣಾ ಇಲಾಖೆಗೆ ಬೇಕಾದ ಸಾಮಗ್ರಿಗಳನ್ನು ಉತ್ಪಾದನೆ ಮಾಡುತ್ತಿದೆ. ಖಾಯಂ ನೌಕರರಿಗಿಂತ ಗುತ್ತಿಗೆ ಕಾರ್ಮಿಕರೇ ಹೆಚ್ಚಾಗಿದ್ದಾರೆ. ಮುಷ್ಕರ ನಿರತರ ಬೇಡಿಕೆಗಳು ಬಹುತೇಕ ಅರ್ಥಪೂರ್ಣವಾಗಿವೆ. ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಿರುವವರಿಗೆ ಖಾಯಂ ಆಗುವ ಆಸೆ ಇದೆ. ಆದರೆ ಮುಷ್ಕರದಿಂದಲೇ ಎಲ್ಲವನ್ನೂ ಸಾಧಿಸುತ್ತೇವೆ ಎಂಬ ಭಾವನೆ ಬೇಡ. ಅವರ ಕಷ್ಟಗಳನ್ನು ವ್ಯಕ್ತಪಡಿಸುವಾಗ ಒಂದೇ ದಾರಿಯನ್ನೇ ಹುಡುಕಬಾರದು. ಕಾರ್ಮಿಕರ ಸಮಸ್ಯೆ ನೀಗಿಸುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪತ್ರ ಬರೆಯಲಾಗಿದೆ. ಅವರು ಅದಕ್ಕೆ ಉತ್ತರ ಬರೆದಿದ್ದಾರೆ. ಬೆಮಲ್ ಸಿಎಂಡಿ ಅವರನ್ನು ಭೇಟಿ ಮಾಡಿದ್ದಾಗ, ಅವರು ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಲು ಆಗದ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. ಅದು ಪಾಲಿಸಿ ವಿಷಯವಾಗಿದ್ದರಿಂದ ಉನ್ನತ ಮಟ್ಟದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸಿಎಂಡಿ ಸ್ಪಷ್ಟಪಡಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಮಿಕರ ಸಮಸ್ಯೆಯನ್ನು ಪ್ರಾಥಮಿಕವಾಗಿ ಕಾರ್ಮಿಕ ಆಯುಕ್ತರ ಸಮ್ಮುಖದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ. ಮುಷ್ಕರ ನಿರತರು ಯಾವ ದಾರಿಯಲ್ಲಿ ಹೋದರೆ ಫಲ ಪಡೆಯಬಹುದು ಎಂಬುದನ್ನು ಯೋಚಿಸಬೇಕು ಎಂದು ರೂಪಕಲಾ ತಿಳಿಸಿದರು.

ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗೋಪಾಲರೆಡ್ಡಿ , ರಾಬರ್ಟಸನ್ಪೇಟೆ ನಗರಸಭೆ ಅಧ್ಯಕ್ಷೆ ಇಂದಿರಾಗಾಂಧಿ ಹಾಜರಿದ್ದರು.

ಕೆಡಿಎ ಇಬ್ಭಾಗ

ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರವನ್ನು ಕೆಜಿಎಫ್ ನಗರಕ್ಕೆ ಸೀಮಿತ ಮಾಡಿ, ಬಂಗಾರಪೇಟೆ ಕ್ಷೇತ್ರಕ್ಕೆ ಪ್ರತ್ಯೇಕವಾದ ಪ್ರಾಧಿಕಾರವನ್ನು ರಚಿಸಲು ತೀರ್ಮಾನಿಸಲಾಗಿದೆ. ಬಂಗಾರಪೇಟೆ ತಾಲ್ಲೂಕಿಗೆ ಪ್ರತ್ಯೇಕವಾಗಿ ಬುಡಾ ರಚನೆಯಾಗಲಿದೆ. ಇದರಿಂದ ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದ ಅಸ್ತಿತ್ವಕ್ಕೆ ಏನೂ ತೊಂದರೆಯಾಗುವುದಿಲ್ಲ. ಕೆಜಿಎಫ್ ನಗರ ಹೊರೆತುಪಡಿಸಿ, ಕ್ಯಾಸಂಬಳ್ಳಿ, ಬೇತಮಂಗಲ, ಸುಂದರಪಾಳ್ಯ ಸೇರಿಸಿ ಪ್ರಾಧಿಕಾರ ಮಾಡಿದರೆ ಉತ್ತಮ ಯೋಜನೆ ರೂಪಿಸಲು ಸಾಧ್ಯವಾಗುತ್ತದೆ. ಅದೇ ರೀತಿ ಬಂಗಾರಪೇಟೆ ಅಭಿವೃದ್ಧಿ ಪ್ರಾಧಿಕಾರದಿಂದ ಬೂದಿಕೋಟೆ, ಕಾಮಸಮುದ್ರ ಮೊದಲಾದ ಪ್ರದೇಶಗಳಿಗೆ ಉಪಯೋಗವಾಗುತ್ತದೆ ಎಂದು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.