ಕೋಲಾರ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

7

ಕೋಲಾರ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

Published:
Updated:
Deccan Herald

ಕೋಲಾರ: ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಬುಧವಾರ (ಸೆ.5) ನಡೆಯುವ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಇಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರತ್ನಯ್ಯ ನೇತೃತ್ವದ ಸಮಿತಿ ಸಭೆಯಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳ 6 ಮಂದಿ ಪ್ರೌಢ ಶಾಲಾ ಶಿಕ್ಷಕರು, 4 ಮಂದಿ ಹಿರಿಯ ಪ್ರಾಥಮಿಕ ಮತ್ತು 3 ಮಂದಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು.

ಪ್ರೌಢ ಶಾಲಾ ವಿಭಾಗದಲ್ಲಿ ಬಂಗಾರಪೇಟೆ ಬಾಲಕರ ಪದವಿ ಪೂರ್ವ ಕಾಲೇಜಿನ ಎಲ್.ಎಂ.ಮಂಜುನಾಥ್, ಕೆಜಿಎಫ್‌ನ ರಾಬರ್ಟ್‌ಸನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಸ್.ಗಾಯಿತ್ರಿ, ಮಾಲೂರು ತಾಲ್ಲೂಕು ಅರಳೇರಿ ಸರ್ಕಾರಿ ಪ್ರೌಢ ಶಾಲೆಯ ಬಿ.ಸುರೇಶ್, ಕೋಲಾರ ತಾಲ್ಲೂಕು ಕುರಗಲ್ ಸರ್ಕಾರಿ ಪ್ರೌಢ ಶಾಲೆಯ ಟಿ.ಕೆ.ಗಂಗಾಧರಮೂರ್ತಿ, ಮುಳಬಾಗಿಲು ಸರ್ಕಾರಿ ಪದವಿ ಪೂರ್ವ ಕಾಲೇಜು ಉಪ ಪ್ರಾಂಶುಪಾಲ ಬಿ.ಚಲಪತಿ, ಶ್ರೀನಿವಾಸಪುರ ತಾಲ್ಲೂಕು ಯಲ್ದೂರು ನ್ಯಾಷನಲ್ ಪ್ರೌಢ ಶಾಲೆ ಶಿಕ್ಷಕ ಡಿ.ವಿ.ಸಿದ್ದಾರೆಡ್ಡಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬಂಗಾರಪೇಟೆ ತಾಲ್ಲೂಕಿನ ಸಿದ್ದನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಅಲ್ತಾಫ್ ಪಾಷಾ, ಕೋಲಾರ ತಾಲ್ಲೂಕು ರಾಮಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಕೆ.ಶ್ರೀನಿವಾಸ್‌, ಮಾಲೂರು ತಾಲ್ಲೂಕು ನೊಸಗೆರೆ ಶಾಲೆ ಮುಖ್ಯ ಶಿಕ್ಷಕ ಸುಂದರೇಶ್, ಶ್ರೀನಿವಾಸಪುರ ತಾಲ್ಲೂಕು ಕುಪ್ಪಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎನ್.ರಾಮಚಂದ್ರ ಅವರನ್ನು ಆಯ್ಕೆ ಮಾಡಲಾಗಿದೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬಂಗಾರಪೇಟೆ ತಾಲ್ಲೂಕು ಕಲ್ಲಾವಿ ಹೊಸಹಳ್ಳಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಕೆ.ಎನ್.ಸುರೇಶ್, ಕೆಜಿಎಫ್ ತಾಲ್ಲೂಕಿನ ದೋಣಿಮಡಗು ಕಿರಿಯ ಪ್ರಾಥಮಿಕ ಶಾಲೆಯ ಎಸ್.ವೈ.ಜಯರಾಮ್, ಮುಳಬಾಗಿಲು ತಾಲ್ಲೂಕು ಮಂಚಿಗಾನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಪಿ.ಎಂ.ಲೀಲಾವತಿ ಆಯ್ಕೆಯಾಗಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !