ಬೇತಮಂಗಲ: ಗ್ರಾಮದ ಸಂತೆ ಮೈದಾನ ಹಾಗೂ ಮಾದರಿ ಶಾಲೆಯ ಕಾಂಪೌಂಡ್ ಪಕ್ಕದಲ್ಲಿ ತಾತ್ಕಾಲಿಕ ಟೆಂಟ್ಗಳಲ್ಲಿ ತರಕಾರಿ ಮತ್ತು ಹಣ್ಣು ವ್ಯಾಪಾರ ಮಾಡುತ್ತಿದ್ದ ಬೀದಿಬದಿ ವ್ಯಾಪಾರಿಗಳು ಶುಕ್ರವಾರ ಹಾಗೂ ಶನಿವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ತತ್ತರಿಸಿದ್ದಾರೆ.

ಗಾಳಿ ಮಳೆಗೆ ತಾತ್ಕಾಲಿಕ ಟೆಂಟ್ಗಳು ಕಿತ್ತು ಹೋಗಿದ್ದು, ವ್ಯಾಪಾರಸ್ಥರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದೆಡೆ ವ್ಯಾಪಾರವಿಲ್ಲದೆ ನಷ್ಟ ಅನುಭವಿಸುತ್ತಿದ್ದರೆ, ಮತ್ತೊಂದೆಡೆ ಮಳೆಯಿಂದಾಗಿ ಹಣ್ಣು, ತರಕಾರಿ ಹಾಳಾಗುತ್ತಿವೆ.

ಬೀದಿಬದಿ ವ್ಯಾಪಾರಿಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಸಣ್ಣ ಶೆಡ್ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದರು. ಆದರೆ, ಕಾಮಗಾರಿ ಕೇವಲ ನೆಲಕ್ಕೆ ಕಾಂಕ್ರೀಟ್ ಹಾಕುವುದಕ್ಕಷ್ಟೇ ಸೀಮಿತವಾಗಿದೆ ಎಂದು ಬೀದಿಬದಿ ವ್ಯಾಪಾರಿಗಳು ದೂರಿದ್ದಾರೆ.

ಪ್ರತಿನಿತ್ಯ ಮಾರುಕಟ್ಟೆಗೆ ಹೋಗಿ ತರಕಾರಿ ತರುತ್ತೇವೆ. ಆದರೆ, ಮಾರಾಟವಾಗದೆ ಉಳಿಯುವ ತರಕಾರಿಯನ್ನು ಸುರಕ್ಷಿತವಾಗಿಡಲು ಸೂಕ್ತ ಜಾಗವಿಲ್ಲ. ಮಳೆ ನೀರಿಗೆ ನೆಂದು ತರಕಾರಿ ಎಲ್ಲವೂ ಕೊಳೆಯುತ್ತಿವೆ. ಇದರಿಂದ ಕೈಗೆ ಬಂದ ಲಾಭ ಬಾಯಿಗೆ ಬರದಂತಾಗಿದೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡರು.

ಈಗಲಾದರೂ ಜನಪ್ರತಿನಿಧಿಗಳು ಅಥವಾ ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತು ಅರ್ಧಕ್ಕೆ ನಿಂತಿರುವ ಶೆಡ್ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಬೇಕೆಂದು ವ್ಯಾಪಾರಿಗಳು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-18-783731007

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.