ಬೇತಮಂಗಲ: ಕ್ಯಾಸಂಬಳ್ಳಿ ಗ್ರಾಮೀಣ ವಿದ್ಯಾ ಸಂಸ್ಥೆ ಕ್ರೀಡಾಂಗಣದಲ್ಲಿ ಹೋಬಳಿ ಮಟ್ಟದ 2025-26ನೇ ಸಾಲಿನ ಕ್ರೀಡಾಕೂಟಕ್ಕೆ ಗಣ್ಯರು ಚಾಲನೆ ನೀಡಿದರು.

ಶಿಕ್ಷಣಾಧಿಕಾರಿ ಮಂಜುನಾಥ್ ಮಾತನಾಡಿ. ಯಾವುದೇ ಒಬ್ಬ ವಿದ್ಯಾರ್ಥಿಯು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಪ್ರಾಥಮಿಕ ಶಾಲಾ ಮಟ್ಟದ ಕ್ರೀಡೆ ಬಹು ಮುಖ್ಯ. ಮುಖ್ಯವಾಗಿ ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಎಪಿಎಂಸಿ ಅಧ್ಯಕ್ಷ ವಿಜಯ ರಾಘು ರೆಡ್ಡಿ ಮಾತನಾಡಿ, ಕ್ರೀಡೆಯಲ್ಲಿ ರಾಜ್ಯಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಕೆ.ಸಿ.ರೆಡ್ಡಿ ಅವರ ತವರೂರಿನ ಕೀರ್ತಿ ಮತ್ತಷ್ಟು ಹೆಚ್ಚಿಸಬೇಕು ಎಂದು ತಿಳಿಸಿದರು.

ಮಕ್ಕಳು ಕ್ರೀಡಾಕೂಟಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದೇಹವನ್ನು ಸದೃಢವಾಗಿ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನರಸಿಂಹಮೂರ್ತಿ, ದೈಹಿಕ ಶಿಕ್ಷಣ ಶಿಕ್ಷಕ ಪರಿವೀಕ್ಷಕ ನಾರಾಯಣಸ್ವಾಮಿ, ಸಿಆರ್ಪಿ ರಾಮಮೂರ್ತಿ ಮಾತನಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಿವಾಸ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರವಿಚಂದ್ರನ್ ನಾಯ್ಡು, ನೌಕರರ ಸಂಘದ ಸದಸ್ಯರಾದ ಕೃಷ್ಣ ಮೂರ್ತಿ, ಭಾರತಿ, ಕೃಷ್ಣಮೂರ್ತಿ, ಉಷಾ, ಮುಖ್ಯ ಶಿಕ್ಷಕಿ ಮರ್ಸಿ, ಸಂಪಂಗಿ ರೆಡ್ಡಿ, ಆನಂದ್, ಶಂಕರ್, ಶಿವಪ್ಪ ಸೇರಿದಂತೆ ದೈಹಿಕ ಶಿಕ್ಷಕರು, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.