ಜಿಲ್ಲೆಯಲ್ಲಿ ಒಟ್ಟು 3232 ಕೆರೆಗಳಿದ್ದು ಒತ್ತುವರಿ ತೆರವು ಕಾರ್ಯ ಪ್ರಗತಿಯಲಿದೆ. 2700 ಕೆರೆಗಳ ಸರ್ವೇ ಮಾಡಿ ಜೊತೆಗೆ ಒತ್ತುವರಿ ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ.
– ಎಂ.ಆರ್.ರವಿ, ಜಿಲ್ಲಾಧಿಕಾರಿ
ಅಧಿಕಾರಿಗಳ ವಿರುದ್ಧ ಅಸಮಾಧಾನ
15 ದಿನಗಳಿಂದ ನಿರಂತರವಾಗಿ ಪಾಲಾರ್ ನದಿಯು ಕೋಡಿ ಹೋಗುತ್ತಿದ್ದು ಹೆಚ್ಚಿನ ಪ್ರವಾಸಿಗರು ಬರುತ್ತಿದ್ದಾರೆ. ಆದರೆ ಸ್ಥಳೀಯ ಗ್ರಾಮ ಪಂಚಾಯಿತಿ ಕಂದಾಯ ಇಲಾಖೆ ಜಲಮಂಡಳಿ ಪೊಲೀಸ್ ಇಲಾಖೆ ಸೇರಿದಂತೆ ಯಾರೊಬ್ಬರೂ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲದಿರುವುದು ಸ್ವಚ್ಛತೆ ಕಾಪಾಡಿಕೊಳ್ಳದಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿಯು ಅಸಮಾಧಾನ ವ್ಯಕ್ತಪಡಿಸಿದರು. ತಕ್ಷಣವೇ ಕ್ರಮ ವಹಿಸುವಂತೆ ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗೆ ಸೂಚಿಸಿದರು.
ಬೇತಮಂಗಲ ಕೆರೆ ಕೋಡಿ ಹರಿಯುತ್ತಿದ್ದು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಭರವಸೆ