ಬೇತಮಂಗಲ: ಇಲ್ಲಿನ ಐತಿಹಾಸಿಕ ಹಸಿ ಕರಗ ಮಹೋತ್ಸವ ಮಂಗಳವಾರ ರಾತ್ರಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು.

ಗ್ರಾಮ ಹೊರವಲಯದ ಕೊಳದ ಬಳಿ ಕರಗವನ್ನು ಸಿದ್ಧಪಡಿಸಿ, ಪೂಜೆ ಸಲ್ಲಿಸಿದ ನಂತರ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕರಗ ಹೊತ್ತ ಪೂಜಾರಿ ಗ್ರಾಮದ ಮನೆ ಮನೆಗೆ ತೆರಳಿದರು, ಭಕ್ತರು ಪೂಜೆ ಸಲ್ಲಿಸಿದರು.

ತಮಟೆ ಹಾಗೂ ನಾದಸ್ವರದ ಶಬ್ದಕ್ಕೆ ಕರಗ ಹೊತ್ತ ಪೂಜಾರಿ ನೃತ್ಯ ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು. ಈ ಹಸಿ ಕರಗ ಮಹೋತ್ಸವವನ್ನು ಕಣ್ಣುಂಬಿಕೊಳ್ಳಲು ಬೇತಮಂಗಲ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಭಕ್ತರು ಆಗಮಿಸಿದ್ದರು.

ವಿಜಯೇಂದ್ರ ಸ್ವಾಮಿ ಬ್ರಹ್ಮರಥೋತ್ಸವ ಅಂಗವಾಗಿ ಮಂಗಳವಾರ ರಾತ್ರಿ ಹಂಸ ವಾಹನ ಉತ್ಸವ ವಿಶೇಷ ಗಮನ ಸೆಳೆಯಿತು.

ಜನದಟ್ಟಣೆ ನಿಯಂತ್ರಣಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು. ಇಡೀ ಗ್ರಾಮವು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-18-1288444316

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.