ಮಂಗಳವಾರ, ಏಪ್ರಿಲ್ 7, 2020
19 °C
ಮಜರ ರಾಮಪುರ ಘಟಕ ಸಿದ್ಧಗೊಂಡು 2 ವರ್ಷವಾದರೂ ಹನಿಯುತ್ತಿಲ್ಲ ನೀರು

ಉದ್ಘಾಟನೆ ಭಾಗ್ಯ ಕಾಣದ ನೀರಿನ ಘಟಕ

ಸರೇಶ ಎಂ. Updated:

ಅಕ್ಷರ ಗಾತ್ರ : | |

Prajavani

ಬೇತಮಂಗಲ: ಕೆಜಿಎಫ್ ತಾಲ್ಲೂಕಿನ ಕ್ಯಾಸಂಬಳ್ಳಿ ಹೋಬಳಿಯ ಮಜರ ರಾಮಪುರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಿ 2 ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ಇದರಿಂದ ಗ್ರಾಮಸ್ಥರಿಗೆ ಶುದ್ಧ ನೀರಿನ ಭಾಗ್ಯವೂ ಮರೀಚಿಕೆಯಾಗಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅನುದಾನದಲ್ಲಿ ಸುಸಜ್ಜಿತವಾದ ಘಟಕವನ್ನು ನಿರ್ಮಾಣ ಮಾಡಲಾಗಿದೆ. ಆದರೆ ಘಟಕ ನೀರು ನೀಡದ  ಗ್ರಾಮಸ್ಥರು ನಿತ್ಯ ಕ್ಯಾಸಂಬಳ್ಳಿ ಗ್ರಾಮಕ್ಕೆ ತರೆಳಿ ಕುಡಿಯುವ ನೀರನ್ನು ತರಬೇಕಾದ ಪರಿಸ್ಥಿತಿ ಇದೆ.

ಕೆಲವು ಗ್ರಾಮಸ್ಥರು ನಿತ್ಯ ಫ್ಲೋರೈಡ್ ಯುಕ್ತ ನೀರು ಸೇವಿಸುತ್ತಿದ್ದಾರೆ. 

ಗ್ರಾ.ಪಂ ಅಧಿಕಾರಿಗಳ ಮೌನ: ಕ್ಯಾಸಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರಿನ ಭಾಗ್ಯ ಕಲ್ಪಿಸುವಲ್ಲಿ ಪಂಚಾಯಿತಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬ ಆರೋಪ ಗ್ರಾಮಸ್ಥರದ್ದು.

ಕ್ಯಾಸಂಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಜಯಪ್ರಕಾಶ್ ನಾಯ್ಡು ನಿತ್ಯ ಇದೇ ರಸ್ತೆಯಲ್ಲಿ ಸಂಚರಿಸುತ್ತಾರೆ. ಆದರೂ ಸಮಸ್ಯೆ ಪರಿಹರಿಸಲು ಮುಂದಾಗಿಲ್ಲ. ಶಾಸಕಿ ಎಂ.ರೂಪಕಲಾ ಶಶಿಧರ್ ಅವರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರುತ್ತಾರೆ. 

*

ಈ ವ್ಯಾಪ್ತಿಯ ಜಿಲ್ಲಾ ಪಂಚಾಯಿತಿ ಸದಸ್ಯ ಬಿಜೆಪಿ ಹಾಗೂ ಶಾಸಕಿ ಕಾಂಗ್ರೆಸ್ ಪಕ್ಷವಾಗಿದ್ದು, ಹೊಂದಾಣಿಕೆ ಸಮಸ್ಯೆಯಿಂದ ಮೂಲ ಸೌಕರ್ಯಗಳಿಗೆ ತೊಂದರೆಯಾಗಿದೆ
-ದೇವರಾಜ್, ಗ್ರಾಮದ ಮುಖಂಡ, ಮಜರ ರಾಮಪುರ

*

ಘಟಕ ನಿರ್ಮಾಣದ ಸಣ್ಣ ಪುಟ್ಟ ಕೆಲಸವನ್ನು ಶೀಘ್ರದಲ್ಲೇ ಮುಗಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ಸಾಧ್ಯವಾದಷ್ಟು ಬೇಗ ಘಟಕ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ
-ಜಯಪ್ರಕಾಶ್ ನಾಯ್ಡು, ಜಿ.ಪಂ ಸದಸ್ಯ, ಕ್ಯಾಸಂಬಳ್ಳಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು