ಗುರುವಾರ , ಡಿಸೆಂಬರ್ 1, 2022
25 °C

ದೇಶ ವಿಭಜನೆ ಶಕ್ತಿಗಳಿಗೆ ‘ಭಾರತ್‌ ಜೋಡೊ’ ಪ್ರೋತ್ಸಾಹ: ತೇಜಸ್ವಿ ಸೂರ್ಯ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಭಾರತ್‌ ಜೋಡೊ ಯಾತ್ರೆ ಪ್ರಾರಂಭವಾದಾಗಿನಿಂದ ದೇಶ ವಿಭಜನೆ ಶಕ್ತಿಗಳಿಗೆ ರಾಹುಲ್‌ ಗಾಂಧಿ ಪ್ರೋತ್ಸಾಹ ತುಂಬುತ್ತಿದ್ದಾರೆ’ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದರು.

ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ, ರಾಜಸ್ಥಾನದಲ್ಲಿ ಅಶೋಕ್‌ ಗೆಹಲೋತ್‌ ಹಾಗೂ ಸಚಿನ್‌ ಪೈಲಟ್‌ ಅವರನ್ನು ಮೊದಲು ಜೋಡೊ ಮಾಡಿ. ಪಕ್ಷದಲ್ಲೇ ಬಿರುಕು ಇಟ್ಟುಕೊಂಡು ದೇಶ ಒಗ್ಗೂಡಿಸಲು ಹೊರಟಿರುವುದು ಹಾಸ್ಯಾಸ್ಪದ’ ಎಂದರು.
 
‘ಮೂರು ವರ್ಷಗಳಿಂದ ಪಕ್ಷಕ್ಕೆ ಒಬ್ಬ ಅಧ್ಯಕ್ಷನನ್ನು ನೇಮಕ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು ದೇಶವನ್ನು ಹೇಗೆ ಮುನ್ನಡೆಸುತ್ತೀರಿ? ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಲವಂತದಿಂದ ಅಧ್ಯಕ್ಷ ಸ್ಥಾನದ ಸ್ಪರ್ಧೆಗೆ ಇಳಿಸಲಾಗಿದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು