ಬುಧವಾರ, ಮೇ 18, 2022
28 °C

ಮಾರುಕಟ್ಟೆಯಲ್ಲಿದ್ದ ಬೈಕ್ ಕಳವು: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಳಬಾಗಿಲು: ಜನನಿಬಿಡ ಮಾರುಕಟ್ಟೆಯಲ್ಲಿ ಹಾಡಹಗಲೇ ಬೈಕ್ ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ತಗ್ಗಿಹೊಸಹಳ್ಳಿ ಗ್ರಾಮದ ಮುನಿರಾಜು(42) ಬಂಧಿತ.

ಬುಧವಾರ ಮಧ್ಯಾಹ್ನ ತಾಲ್ಲೂಕಿನ ಕಸಬಾ ಹೋಬಳಿಯ ಎನ್. ವಡ್ಡಹಳ್ಳಿ ಗ್ರಾಮದ ಟೊಮೆಟೊ ಮಾರುಕಟ್ಟೆ ಬಳಿ ಬೈಕ್ ಕಳವು ಮಾಡಿ ಪರಾರಿಯಾಗುತ್ತಿದ್ದ. ಖಚಿತ ಮಾಹಿತಿ ಮೇರೆಗೆ ನಂಗಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು