ಬಂಗಾರಪೇಟೆ: ಬಿಸಾನತ್ತ ರೈಲ್ವೆ ನಿಲ್ದಾಣದಿಂದ ಆಂಧ್ರಪ್ರದೇಶದ ಗಡಿ ಭಾಗದವರೆಗೆ ರಸ್ತೆ ನಿರ್ಮಾಣ ಅಭಿವೃದ್ಧಿ ಸಹಿಸದ ಕೆಲವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಹಿರಿಯ ಮುಖಂಡ ಜಿ.ವಿ ಶ್ರೀನಿವಾಸಮೂರ್ತಿ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೋಣಿಮಡಗು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬಿಸಾನತ್ತ ರೈಲ್ವೆ ನಿಲ್ದಾಣದಿಂದ ಆಂಧ್ರಪ್ರದೇಶದ ಗಡಿಭಾಗದವರೆಗೆ ಸಿಸಿ ರಸ್ತೆ ಕಾಮಗಾರಿ ವೈನ್ ಶಾಪ್ಗೆ ಅನುಕೂಲವಾಗುವಂತೆ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರವಾದದ್ದು. ರಾಜಕೀಯ ಉದ್ದೇಶಕ್ಕಾಗಿ ಆರೋಪಿಸುತ್ತಿದ್ದಾರೆ. ₹15 ಲಕ್ಷ ಅನುದಾನ ಮಂಜೂರು ಆಗಿದೆ. ಗುಣಮಟ್ಟದಿಂದ ರಸ್ತೆ ನಿರ್ಮಾಣವಾದರೆ ಕೆಜಿಎಫ್ ಮತ್ತು ಆಂಧ್ರಪ್ರದೇಶದ ಕುಪ್ಪಂ, ದ್ರಾವಿಡ ವಿಶ್ವವಿದ್ಯಾಲಯ, ಹೂವಿನ ಮಾರುಕಟ್ಟೆಗೆ ಅನುಕೂಲಕರವಾಗಿದೆ ಎಂದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸೋಮಶೇಖರ್ ರೆಡ್ಡಿ, ಈ ರಸ್ತೆಯು ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದೆ. ಇಲ್ಲಿವರೆಗೆ ಯಾರೂ ಕೂಡ ಈ ರಸ್ತೆಯನ್ನು ನಿರ್ಮಾಣ ಮಾಡಿಲ್ಲ. ಅಭಿವೃದ್ಧಿಗೆ ಅಡ್ಡಿಪಡಿಸುವುದು ಸರಿ ಅಲ್ಲ ಎಂದರು.

ಟಿಎಪಿಎಂಎಸ್ ಸದಸ್ಯರಾದ ಸೀತಾರಾಮಪ್ಪ, ಡಿ.ಬಾಲಚಂದ್ರ, ಜೆಡಿಎಸ್ ಮುಖಂಡರಾದ ಶ್ರೀನಿವಾಸ್ ಗೌಡ , ಬಸಪ್ಪ, ನರಸಿಂಹ ಮೂರ್ತಿ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.