ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಟ್‌ ಕಾಯಿನ್‌ ಪ್ರಕರಣದಲ್ಲಿ ತಪ್ಪಿಸ್ಥರಿಗೆ ಶಿಕ್ಷೆಯಾಗಲಿ; ರಾಮಲಿಂಗಾ ರೆಡ್ಡಿ

Last Updated 15 ನವೆಂಬರ್ 2021, 14:59 IST
ಅಕ್ಷರ ಗಾತ್ರ

ಕೋಲಾರ: ‘ಬಿಟ್ ಕಾಯಿನ್ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಭಾಗಿಯಾಗಿದ್ದರೂ ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ಆಗಬೇಕು. ಪ್ರಕರಣದ ನಿಷ್ಪಕ್ಷಪಾತವಾಗಿ ನಡೆಯಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಚಿವ ರಾಮಲಿಂಗಾರೆಡ್ಡಿ ಒತ್ತಾಯಿಸಿದರು.

ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಬಿಟ್‌ ಕಾಯಿನ್ ಇರುವುದು ತಪ್ಪಲ್ಲ. ಆದರೆ, ಹ್ಯಾಕಿಂಗ್‌ ಮಾಡಿ ಅಕ್ರಮ ಎಸಗಿದವರ ವಿರುದ್ಧ ಸರ್ಕಾರ ಏಕೆ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್‌ ‍ಪ್ರಶ್ನಿಸುತ್ತಿದೆ. ಬಿಜೆಪಿ ಸರ್ಕಾರದ ತನಿಖೆ ಮೇಲೆ ನಂಬಿಕೆಯಿಲ್ಲ. ಆದ ಕಾರಣ ಪಕ್ಷವು ನ್ಯಾಯಾಂಗ ತನಿಖೆಗೆ ಒತ್ತಾಯಿಸುತ್ತಿದೆ’ ಎಂದರು.

‘ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಕರಣದ ತನಿಖೆ ಮಾಡಿಸಬೇಕು. ಪ್ರಕರಣದಲ್ಲಿ ಕಾಂಗ್ರೆಸ್‌ನವರ ಪಾತ್ರವಿದ್ದರೂ ಬಂಧಿಸಿ ವಿಚಾರಣೆ ಮಾಡಲಿ. ಬಿಟ್ ಕಾಯಿನ್ ಹಗರಣದ ವಿಚಾರದಲ್ಲಿ ಕಾಂಗ್ರೆಸ್ ಆಡಳಿತಾವಧಿ ಅಥವಾ ಬಿಜೆಪಿ ಆಡಳಿತಾವಧಿ ಎಂಬ ಚರ್ಚೆ ಬೇಡ’ ಎಂದು ಹೇಳಿದರು.

ಬಿಟ್‌ ಕಾಯಿನ್‌ ಹಗರಣದಲ್ಲಿ ಕಾಂಗ್ರೆಸ್‌ ಮುಖಂಡ ಮಕ್ಕಳಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ರಾಮಲಿಂಗಾರೆಡ್ಡಿ, ‘2016ರಲ್ಲಿ ನಡೆದದ್ದು ಗಲಾಟೆ ಮಾತ್ರ. ಆ ಪ್ರಕರಣಕ್ಕೂ ಬಿಟ್ ಕಾಯಿನ್‍ಗೂ ಯಾವುದೇ ಸಂಬಂಧವಿಲ್ಲ’ ಎಂದು ಗುಡುಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT