ಕೋಲಾರ: ಹುಬ್ಬಳ್ಳಿಯಲ್ಲಿ ಪಕ್ಷದ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು, ಮುಖಂಡರು ಜಿಲ್ಲಾಡಳಿತ ಭವನ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಗೃಹ ಸಚಿವ ಜಿ.ಪರಮೇಶ್ವರ್ ಕೂಡಲೇ ರಾಜೀನಾಮೆ ನೀಡಬೇಕು, ಅಧಿಕಾರಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ರಾಜ್ಯಪಾಲರಿಗೆ ಜಿಲ್ಲಾಧಿಕಾರಿ ಎಂ.ಆರ್.ರವಿ ಮೂಲಕ ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಅರುಣಮ್ಮ, ಕೆಜಿಎಫ್ನ ಅಶ್ವಿನಿ ಸಂಪಂಗಿ ನೇತೃತ್ವದಲ್ಲಿ ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

‘ಜ.5 ರಂದು ಹುಬ್ಬಳಿಯಲ್ಲಿ ನಡೆದ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು. ಪೊಲೀಸರು ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಅವರನ್ನು ಮಧ್ಯರಾತ್ರಿ 2 ಗಂಟೆಯಲ್ಲಿ ಮನೆಗೆ ಹೋಗಿ ಬಂಧಿಸಿದ್ದಾರೆ. ಅಲ್ಲದೆ, ಮಹಿಳೆಯನ್ನು ಬಂಧಿಸುವ ಸಂದರ್ಭದಲ್ಲಿ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ’ ಎಂದು ಆರೋಪಿಸಿದರು.

ಮಹಿಳೆಯರನ್ನು ರಕ್ಷಿಸಬೇಕಾದ ಪೊಲೀಸರೇ ದೌರ್ಜನ್ಯ ನಡೆಸಿದರೆ ಇನ್ನಾರೂ ರಕ್ಷಣೆ ನೀಡುತ್ತಾರೆ? ಈ ಸರ್ಕಾರ ಹಾಗೂ ಗೃಹ ಸಚಿವರು ಇದ್ದರೆಷ್ಟು, ಹೋದರೆಷ್ಟು? ಅವರ ಕೈಯಲ್ಲಿ ಮಹಿಳೆಯರಿಗೆ ರಕ್ಷಣೆ ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ತೊಲಗಲಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜಕೀಯ ದ್ವೇಷಕ್ಕಾಗಿ ಒಬ್ಬ ಮಹಿಳೆ ಮೇಲೆ ಸಾರ್ವಜನಿಕವಾಗಿ ದೌರ್ಜನ್ಯ ಎಸಗಿರುವುದು ಅಕ್ಷಮ್ಯ ಅಪರಾಧವಾಗಿದೆ. ಈ ರೀತಿ ದೌರ್ಜನ್ಯ ನಡೆಸಿದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು. ಸುಜಾತಾ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದು, ಈಚೆಗೆ ಬಿಜೆಪಿ ಸೇರಿದ್ದಾರೆಂಬ ರಾಜಕೀಯ ದ್ವೇಷಕ್ಕಾಗಿ ಕಾಂಗ್ರೆಸ್ ಕಾರ್ಪೊರೇಟರ್ ಸುವರ್ಣ ಎಂಬುವರ ಸುಳ್ಳು ದೂರಿನ ಮೇಲೆ ಪ್ರಕರಣ ದಾಖಲಿಸಿ ದೌರ್ಜನ್ಯ ಎಸಗುವಂತೆ ಮಾಡಿದ್ದಾರೆ ಎಂದು ದೂರಿದರು.

ಓಂಶಕ್ತಿ ಮಾಲಾಧಾರಿಣಿಗಳ ಮೇಲೆ ಕಲ್ಲು ಎಸೆತ ಪ್ರಕರಣ, ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿದ್ದರೂ ಸಚಿವರು ಪೊಲೀಸರನ್ನು ಎಚ್ಚರಿಸುವ ಕೆಲಸ ಮಾಡುತ್ತಿಲ್ಲ. ರಾಜಕೀಯ ದ್ವೇಷ ತೀರಿಸಿಕೊಳ್ಳಲು ಪೊಲೀಸ್ ಇಲಾಖೆಯನ್ನು ಏಜೆಂಟ್ ಮಾದರಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಗೃಹ ಸಚಿವರಿಗೆ ತಮ್ಮ ಇಲಾಖೆಯ ಮೇಲೆ ಹಿಡಿತ ಇಲ್ಲವಾಗಿರುವುದು ಅವರ ಬೇಜವಾಬ್ದಾರಿ ಹೇಳಿಕೆಗಳಿಂದ ಸ್ವಷ್ಟವಾಗುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದೆ ಗೂಂಡಾಗಿರಿಗೆ ಶ್ರೀರಕ್ಷೆ ನೀಡುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ಈ ಪ್ರಕರಣವನ್ನು ತನಿಖೆ ನಡೆಸಿ ಮುಂದೆ ಈ ರೀತಿ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಅನ್ಯಾಯಕ್ಕೆ ಒಳಗಾಗಿರುವ ಬಿಜೆಪಿ ಕಾರ್ಯಕರ್ತೆಗೆ ಸಾಮಾಜಿಕ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿದರು.

ಸುಳ್ಯದ ಬಿಜೆಪಿ ಶಾಸಕಿಗೆ ಶ್ರದ್ಧಾಂಜಲಿ ಪೋಸ್ಟ್ ಹಾಕಿರುವವರನ್ನೂ ಕೂಡಲೇ ಬಂಧಿಸಿ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿಯು ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಪತ್ರ ಸ್ವೀಕರಿಸಿ ಸರ್ಕಾರಕ್ಕೆ ರವಾನಿಸುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ವಿಜಯಕುಮಾರ್, ಕೆಂಬೋಡಿ ನಾರಾಯಣಸ್ವಾಮಿ, ಸಾಮ ಅನಿಲ್ ಬಾಬು, ಶಿವಕುಮಾರ್ ಪಿ., ಸುಗಟೂರು ಚಂದ್ರಶೇಖರ್, ರಾಜೇಶ್ ಸಿಂಗ್, ಕೆಂಬೋಡಿ ನಾರಾಯಣಸ್ವಾಮಿ, ತಿಮ್ಮರಾಯಪ್ಪ, ಶಿಳ್ಳಂಗೆರೆ ಮಹೇಶ್, ಓಹಿಲೇಶ್, ಅಂಬರೀಷ್, ಮಮತಮ್ಮ, ರಾಜೇಶ್ವರಿ, ಪದ್ಮಾ, ಸುಮಾ, ಸವಿತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.