ಬೇತಮಂಗಲ: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಹಮ್ಮಿಕೊಂಡಿರುವ ‘ಮೈಸೂರು ಚಲೊ’ ಪಾದಯಾತ್ರೆಯು ಮಂಗಳವಾರ ನಾಲ್ಕನೇ ದಿನ ಪೂರೈಸಿತು. ಬಿಜೆಪಿ ಮುಖಂಡ ವೈ. ಸಂಪಂಗಿ ಅವರು ಸತತ ನಾಲ್ಕನೇ ದಿನವೂ ಪಾದಯಾತ್ರೆಯಲ್ಲಿ ಪಾಲ್ಗೊಂಡರು.
ಪಾದಯಾತ್ರೆಯು ಮಂಗಳವಾರ ಮದ್ದೂರು ತಾಲ್ಲೂಕಿನ ನಿಡಘಟ್ಟದಿಂದ ಪ್ರಾರಂಭವಾಯಿತು.
ಯಾತ್ರೆಯಲ್ಲಿ ಕೊಳ್ಳೇಗಾಲದ ಮಾಜಿ ಶಾಸಕ ಎನ್. ಮಹೇಶ್, ಮಾಲೂರಿನ ಮಾಜಿ ಶಾಸಕ ಮಂಜುನಾಥ ಗೌಡ ಹಾಗೂ ಬಿಜೆಪಿ-ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.