ಭಾನುವಾರ, ನವೆಂಬರ್ 29, 2020
22 °C

ಅರ್ನಬ್‌ ಬಂಧನ: ಯುವ ಮೋರ್ಚಾದಿಂದ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಲೂರು: ಪತ್ರಕರ್ತ ಅರ್ನಬ್‌ ಗೋಸ್ವಾಮಿ ಅವರ ಬಂಧನ ಖಂಡಿಸಿ ತಾಲ್ಲೂಕು ಬಿಜೆಪಿ ಯುವ ಮೋರ್ಚಾದ ಸದಸ್ಯರು ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಗುರುವಾರ ಧರಣಿ ನಡೆಸಿದರು.

ಮುಖಂಡ ಗೋವಿಂದಸ್ವಾಮಿ ಮಾತನಾಡಿ, ಅರ್ನಬ್‌ ಗೋಸ್ವಾಮಿ ಅವರನ್ನು ಬಂಧಿಸಿರುವುದು ಖಂಡನೀಯ. ಸೋನಿಯಾ ಸೇನೆಯ ಕಾರ್ಯವೈಖರಿಯೂ ಖಂಡನಾರ್ಹ ಎಂದರು.

ಅರ್ನಬ್‌ ಬಾಲಿವುಡ್‌ನಲ್ಲಿ ಬೇರೂರಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಧ್ವನಿ ಎತ್ತಿದ್ದರು. ಹಾಗಾಗಿಯೇ, ಅವರ ಬಂಧನವಾಗಿದೆ. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು. ಅವರಿಗೆ ಕೇಂದ್ರ ಸರ್ಕಾರ ರಕ್ಷಣೆ ನೀಡುವ ಮೂಲಕ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ನಂತರ ಶಿರಸ್ತೇದಾರ್ ನಾರಾಯಣಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ತಾಲ್ಲೂಕು ಬಿಜೆಪಿ ಅಧ್ಯಕ್ಷ ಪುರ ನಾರಾಯಣಸ್ವಾಮಿ, ಕಾರ್ಯದರ್ಶಿ ಸುರೇಶ್, ರಾಮಮೂರ್ತಿ, ಸುರೇಶ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು